Modi 3.0 Budget: ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ NDA ಮೈತ್ರಿಕೂಟವು 18ನೇ ಲೋಕಸಭಾ ಸರ್ಕಾರವನ್ನು ರಚಿಸಿದೆ. ಮೋದಿ ಸರ್ಕಾರವು ತನ್ನ ಮೂರನೆಯ ಅವಧಿಯ ಮೊದಲ ಬಜೆಟ್ ಮಂಡಿಸಲು ದಿನಾಂಕ ನಿಗದಿ ಪಡಿಸಿದ್ದು, ಇದೇ ಜುಲೈ 23ರಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ.
ಪದ್ಯ 18ನೇ ಲೋಕಸಭಯ ಮೊದಲನೆಯ ಅಧಿವೇಶನವು ಮುಕ್ತಾಯವಾಗಿದ್ದು, ಈ ವೇಳೆಯಲ್ಲಿ ನೂತನವಾಗಿ ಆಯ್ಕೆಯಾದ ಸಂಸದರಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು. ಲೋಕಸಭಾ ಮತ್ತು ರಾಜ್ಯಸಭೆಯನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ಅನೇಕ ವಿಚಾರಗಳನ್ನು ಕುರಿತು ಸುಧೀರ್ಘವಾಗಿ ಮಾತನಾಡಿದರು.
ಚುನಾವಣೆಯ ಸಮಯದಲ್ಲಿ ಬಿಜೆಪಿ ಮೈತ್ರಿಕೂಟವು ಅನೇಕ ಯೋಜನೆಗಳನ್ನು ಘೋಷಣೆ ಮಾಡಿದ್ದು, ದೇಶದ ಜನಸಾಮಾನ್ಯರು ಕೇಂದ್ರ ಸರ್ಕಾರದ ಬಜೆಟ್ ಗಾಗಿ ಕಾಯುತ್ತಿದ್ದಾರೆ. ಲೋಕಸಭೆಯ 2ನೆಯ ಅಧಿವೇಶನವು ಜುಲೈ 22 ರಿಂದ ಆಗಸ್ಟ್ 12ರವರೆಗೆ ನಡೆಯಲಿದ್ದು, ಜುಲೈ 23ರಂದು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ.
ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಧಿವೇಶನದ ಬಗ್ಗೆ ಮಾಹಿತಿ ಪ್ರಕಟಿಸಿದ್ದು 2024- 25ರ ಕೇಂದ್ರ ಬಜೆಟ್ ಜುಲೈ 23ರಂದು ಮಂಡಿಸಲಾಗುತ್ತದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯು ಈ ಬಾರಿಯ ಬಜೆಟ್ ನಲ್ಲಿ ಐತಿಹಾಸಿಕ ನಿಲುವುಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ಹಲವು ಬಾರಿ ಹೇಳಿದ್ದಾರೆ. ಮೋದಿ 3.0 ಸರ್ಕಾರದ ಮೇಲೆ ಜನರು ಅನೇಕ ನಿರೀಕ್ಷೆಗಳನ್ನು ಇಟ್ಟಿದ್ದಾರೆ. ಸತತ 7ನೇ ಬಾರಿ ಬಜೆಟ್ ಮಂಡನೆ ಮಾಡುವ ಮೂಲಕ ವಿತ್ತ ಸಚಿವ ನಿರ್ಮಾಣ ಸೀತಾರಾಮನ್ ಹೊಸ ದಾಖಲೆಗೆ ಕಾರಣರಾಗಿದ್ದಾರೆ.