Dengue: ರಾಜ್ಯದಲ್ಲಿ ಡೆಂಗ್ಯೂ ಡಂಗುರ; 7,000 ಪ್ರಕರಣ ದಾಖಲು, 12ಕ್ಕೆ ಏರಿದ ಸಾವಿನ ಸಂಖ್ಯೆ!

By Aishwarya

Published On:

Follow Us

Dengue: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿಡೆ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಿದೆ.

ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 325 ಮಂದಿಯಲ್ಲಿ ಡೆಂಗ್ಯೂ ಕಾಣಿಸಿಕೊಂಡಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿದ್ದು 175 ಪ್ರಕರಣಗಳು ಒಂದೇ ದಿನ ವರದಿಯಾಗಿವೆ. ದಾಖಲೆ ಪ್ರಮಾಣದಲ್ಲಿ ಆಸ್ಪತ್ರೆಗೆ ಆಗಮಿಸುತ್ತಿರುವ ಡೆಂಗ್ಯೂ ಸುಂಕಿತರು ತಿಂಗಳಾಂತ್ಯಕ್ಕೆ 10 ಸಾವಿರಕ್ಕೂ ಹೆಚ್ಚು ಮಂದಿಯನ್ನು ಕಾಡಲಿದೆ ಎಂದು ಆರೋಗ್ಯ ತಜ್ಞರು ಮಾಹಿತಿ ನೀಡಿದ್ದಾರೆ.

ಇನ್ನೂ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಗೆ ಬಲಿಯಾದವರ ಮಾಹಿತಿ ನೀಡಲು ಆರೋಗ್ಯ ಸಚಿವರು ಸೂಚನೆ ನೀಡಿದ್ದು ಇದರ ಜೊತೆಗೆ ಡೆತ್ ಆಡಿಟ್ ಮಾಡಲು ಮುಂದಾಗಿದ್ದಾರೆ. ಬದಲಾದ ವಾತಾವರಣ ಹವಮಾನ ವೈಪರಿತ್ಯದಿಂದ ರಾಜ್ಯದ ಜನರಲ್ಲಿ ವೈರಲ್ ಜ್ವರಗಳು ಕಾಣಿಸಿಕೊಳ್ಳುತ್ತಿರುವ ಬೆನ್ನೆಲೆ ಬೆಂಗಳೂರಿನಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ.ರಾಜ್ಯದಲ್ಲಿ ಒಂದೇ ದಿನ 175 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,000 ಗಡಿ ದಾಟಿದೆ. ಒಂದೇ ತಿಂಗಳಲ್ಲಿ ಆರು ಮಂದಿ ಬಲಿಯಾಗಿದ್ದಾರೆ.

ಈಡಿಸ್ ಸೊಳ್ಳೆಯಿಂದ ಡೆಂಗ್ಯೂ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದ್ದು ಸುಂಕಿತರಿಗೆ ಸೊಳ್ಳೆ ಕಚ್ಚಿದ ನಾಲ್ಕರಿಂದ ಏಳು ದಿನಗಳಲ್ಲಿ ಹಲವಾರು ಚಿಹ್ನೆಗಳು ಮತ್ತು ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಸರ್ಕಾರವು ಸೊಳ್ಳೆ ಉತ್ಪತ್ತಿಯಾಗುವ ಪ್ರದೇಶಗಳಲ್ಲಿ ನಾಶಪಡಿಸುವ ಬಗ್ಗೆ ಅರಿವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ‌.

ರಾಜ್ಯದಲ್ಲಿ ಡೆಂಗ್ಯೂ ಸಾವಿನ ಪ್ರಕರಣಗಳ ಸಂಖ್ಯೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ವರದಿಗಳ ಪ್ರಕಾರ 12ಕ್ಕೆ ಏರಿದೆ. 12 ಪ್ರಕರಣಗಳ ಪೈಕಿ ಹಾಸನ 6, ಉತ್ತರ ಕನ್ನಡ 2, ಹಾವೇರಿ 1 ಬೆಂಗಳೂರು ವ್ಯಾಪ್ತಿಯಲ್ಲಿ 3 ಸೋಂಕಿತರು ಸಾವನ್ನಪ್ಪಿದ್ದಾರೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow