IND vs SL Women’s Asia Cup 2024 Final: ಸತತ ಗೆಲುವಿನೊಂದಿಗೆ ಫೈನಲ್ ತಲುಪಿದ್ದ ಭಾರತೀಯ ಮಹಿಳಾ ತಂಡದ ವಿರುದ್ಧ ಶ್ರೀಲಂಕಾ 8 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಚಾಂಪಿಯನ್ಸ್ ಪಟ್ಟ ಗೆಟ್ಟಿಸಿಕೊಂಡಿದೆ. ಈ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡ ರೋಚಕ ಗೆಲುವು ಸಾಧಿಸುವುದರೊಂದಿಗೆ ಏಷ್ಯಾಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ.
ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡ ರೋಚಕ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 166 ರನ್‌ಗಳನ್ನು ಗುರಿಯನ್ನು ಶ್ರೀಲಂಕಾಕ್ಕೆ ನೀಡಿತು. ಗುರಿ ಬೆನ್ನಟ್ಟಿದ ಲಂಕಾ 19ನೇ ಓವರ್‌ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.
166 ರನ್ ಗುರಿ ಬೆನ್ನಟ್ಟಿದ ಶ್ರೀಲಂಕಾ ಕೇವಲ 7 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್‌ಗೆ ಅರ್ಧಶತಕಕ್ಕೂ ಹೆಚ್ಚಿನ ಜೊತೆಯಾಟ ಬಂತು. ಶ್ರೀಲಂಕಾ ಪರ ನಾಯಕಿ ಚಾಮರಿ ಅಟಪಟ್ಟು 43 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇವರಲ್ಲದೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಹರ್ಷಿತಾ ಕೂಡ 51 ಎಸೆತಗಳಲ್ಲಿ 69 ರನ್ ಗಳಿಸಿ ತಂಡವನ್ನು ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು.
ಭಾರತದಪರ ಬ್ಯಾಟಿಂಗ್ ಮಾಡಿದ ಸ್ಮೃತಿ ಮಂಧಾನಾ ಜವಾಬ್ದಾರಿಯುತವಾಗಿ ಬ್ಯಾಟ್ ಮಾಡಿ (60) ರನ್ ಕೊಡುಗೆ ಕೊಟ್ಟರು. ಸ್ಲಾಗ್ ಓವರ್‌ಗಳಲ್ಲಿ ಸ್ಪೋಟಕ ಬ್ಯಾಟ್ ಮಾಡಿದ ಜೆಮಿಮಾ ರೊಡ್ರಿಗಸ್ (29) ರನ್ ಸಿಡಿಸಿದರೆ, ವಿಕೆಟ್‌ಕೀಪರ್ ರಿಚಾ ಘೋಷ್ (30) ರನ್ ಬಾರಿಸಿ ತಂಡದ ಮೊತ್ತವನ್ನು 160 ರನ್‌ಗಳ ಗಡಿ ದಾಟುವಂತೆ ಮಾಡಿದರು.
ಮಹಿಳೆಯರ ಏಷ್ಯಾಕಪ್‌ನ 9 ನೇ ಆವೃತ್ತಿಯಾಗಿದ್ದು, ಈ ಟೂರ್ನಿಯ ಪ್ರತಿ ಫೈನಲ್ ಆಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಆಡಿದ 8 ಏಷ್ಯಾಕಪ್ ಫೈನಲ್ ಪಂದ್ಯಗಳಲ್ಲಿ 7 ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದಿದ್ದ ಭಾರತ ಒಮ್ಮೆ ಮಾತ್ರ ಸೋಲನ್ನು ಎದುರಿಸಬೇಕಾಯಿತು. 2018ರಲ್ಲಿ ಬಾಂಗ್ಲಾದೇಶ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು ಸೋಲಿಸಿತ್ತು. ಇದಾದ ನಂತರ ಟೀಂ ಇಂಡಿಯಾ ಈ ಆವೃತ್ತಿಯಲ್ಲಿ ಎರಡನೇ ಬಾರಿ ಏಷ್ಯಾ ಕಪ್ ಗೆಲುವಲ್ಲಿ ಸೋಲನ್ನು ಅನುಭವಿಸಿತು.