ಕಾವೇರಿಗೆ 3ನೇ‌ ಬಾರಿಗೆ ಬಾಗಿನ ಅರ್ಪಿಸಿದ ಸಿಎಂ.ಸಿದ್ದರಾಮಯ್ಯ

By Aishwarya

Published On:

Follow Us

KRS DAM : ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಭಾರಿ ಮಳೆಯಾಗುತ್ತಿದ್ದು, ಕೆ.ಆರ್.ಎಸ್ ಡ್ಯಾಂ ಭರ್ತಿಯಾಗಿದೆ. ಒಂದುವರೆ ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದ್ದು, ಕನ್ನಡ ನಾಡಿನ ಜೀವನದಿ ಕಾವೇರಿ ತುಂಬಿ ಹರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು.

ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ಮಳೆರಾಯನ ಆರ್ಭಟಕ್ಕೆ ಮಂಡ್ಯ ಜಿಲ್ಲೆ ಶ್ರೀರಂಗಟ್ಟಣ ತಾಲೂಕಿನ ಕೆಆರ್​ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.

ಈ ಹಿನ್ನಲೆ‌ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲುಕಿನ ಕೆ.ಆರ್.ಎಸ್ ಜಲಾಶಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೂರನೇ ಬಾರಿಗೆ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ, ಹೆಚ್.ಸಿ .ಮಹದೇವಪ್ಪ ಕೂಡ ಬಾಗಿನ ಅರ್ಪಿಸಿದರು.

ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ 2023ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು ಬಾಗಿನ ಅರ್ಪಿಸಿದ್ದಾರೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow