‘ಕುಸ್ತಿ ನನ್ನ ವಿರುದ್ಧ ಗೆದ್ದಿದೆ’ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

By Aishwarya

Published On:

Follow Us

Vinesh Phogat: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಅಥವಾ ಬೆಳ್ಳಿಯ ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ. 

ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿದಾಯ ಕುರಿತು ಪೋಸ್ಟ್ ಮಾಡಿರುವ ಕುಸ್ತಿಪಟು ವಿನೇಶ್ ಫೋಗಟ್ ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿತು, ನಾನು ಸೋತೆ… ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಬರೆದಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ 50 ಕಿಲೋ ತೂಕದ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಫೈನಲ್‌ಗೂ ಮುನ್ನ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಬುಧವಾರ ಸಂಜೆ ನಡೆಯಲಿದ್ದ ಫೈನಲ್‌ ಪಂದ್ಯಕ್ಕೂ ಮುನ್ನ ಬೆಳಿಗ್ಗೆ 100 ಗ್ರಾಂ ಹೆಚ್ಚಿನ ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಯಿತು.

ಒಲಿಂಪಿಕ್ ಕ್ರೀಡಾಕೂಟದ ಫೈನಲ್‌ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು. ಇದೀಗ ಅನರ್ಹತೆಯಿಂದಾಗಿ ಕಂಚು ಕೂಡ ಅವರಿಗೆ ದೊರೆಯುವುದಿಲ್ಲ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow