2023ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪಟ್ಟಿ ಪ್ರಕಟವಾಗಿದೆ. ಕಳೆದ ತಿಂಗಳು ಪ್ರಕರಣವೊಂದರ ಆರೋಪದಡಿ ಅಮಾನತಾದ ಸಿಸಿಬಿ ಘಟಕದ ಹೆಡ್ ಕಾನ್ಸ್ಟೇಬಲ್ ಸಲೀಂ ಪಾಷಾ ಎಂಬವರ ಹೆಸರು ಈ ಪಟ್ಟಿಯಲ್ಲಿ ಇರುವುದು ಚರ್ಚೆಗೆ ಕಾರಣವಾಗಿದೆ.
ಅಮಾನತು ಆಗಿದ್ದ ಪೇದೆಗೆ ಮುಖ್ಯ ಮಂತ್ರಿ ಪದಕ
ಮೈಸೂರು ಸಿಸಿಬಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಲೀಂ ಪಾಷಾ ಅವರನ್ನು ಅಪರಾಧಿಗಳೊಂದಿಗೆ ಶಾಮೀಲಾದ ಆರೋಪದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಅಮಾನತು ಮಾಡಲಾಗಿತ್ತು.
ಮೈಸೂರಿನ ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನ ಹಾಗೂ ಗಾಂಜಾ ಪ್ರಕರಣಗಳ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಹೊಂದಿರುವುದು ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿತ್ತು ಈ ಕಾರಣ ಕಳೆದ ತಿಂಗಳು ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಅಮಾನತು ಮಾಡಲಾಗಿದೆ.
ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
ಈ ಬಗ್ಗೆ ಬಿಜೆಪಿ ರಾಜ್ಯದ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮೂಲಕ “ಕೆಲ ನಾಮಧೇಯಗಳನ್ನು ಕಂಡರೆ ಈ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿಕೊಳ್ಳುತ್ತದೆ. ಅಪರಾಧಿಯಾಗಿದ್ದರೂ ಸರಿ, ಕಳ್ಳರಾಗಿದ್ದರೂ ಸರಿ, ಕೊನೆಗೆ ಭಯೋತ್ಪಾದಕರಾದರೂ ಸರಿ, ಅವರ ಬಗೆಗಿನ ಕಾಳಜಿಯಲ್ಲಿ ರಾಜೀ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎನ್ನುವುದನ್ನು ಸಾಬೀತುಪಡಿಸುವ ರೀತಿಯಲ್ಲಿ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೊಡಮಾಡುವ “ಮುಖ್ಯಮಂತ್ರಿಗಳ ಪದಕ” ಪಟ್ಟಿಯಲ್ಲಿ ಮೈಸೂರಿನ ಅಮಾನತ್ತಿಗೊಳಗಾದ ಪೊಲೀಸ್ ಪೇದೆಯೊಬ್ಬರ ಹೆಸರು ಪ್ರಕಟವಾಗಿದೆ” ಎಂದು ಪೋಸ್ಟ್ ಮಾಡುವ ಮೂಲಕ ಸರ್ಕಾರದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.