ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ ಕುರಿತಾಗಿ ಗವರ್ನರ್ಗೆ ದೂರು ಸಲ್ಲಿಸಿದ್ದರು. ಆದರೀಗ ಈ ದೂರಿನ ಅನ್ವಯ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ ನೀಡಿದ್ದಾರೆ.
Muda Scam CM Siddaramaiah
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ಖಚಿತಪಡಿಸಿವೆ.
ಈ ಹಿಂದೆ ಆಗಸ್ಟ್ 1ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಮಂತ್ರಿ ಪರಿಷತ್ ಸಭೆ, ಮುಖ್ಯಮಂತ್ರಿಗೆ ಶೋಕಾಸ್ ನೋಟಿಸ್ ನೀಡಿರುವ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ನೋಟಿಸ್ ಹಿಂದಕ್ಕೆ ಪಡೆಯಬೇಕು ಮತ್ತು ಅಬ್ರಹಾಂ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಬೇಕು’ ಎಂದು ರಾಜ್ಯಪಾಲರಿಗೆ ಸಲಹೆ ನೀಡುವ ತೀರ್ಮಾನ ಕೈಗೊಂಡಿತ್ತು.