ಇತ್ತೀಚಿಗೆ ಸರ್ಕಾರವು ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ತೆರೆಯಲು ಚಿಂತನೆ ನಡೆಸುತ್ತಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತೀವ್ರ ವಿರೋಧ ವ್ಯಕ್ತಪಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು. ಇದರಿಂದ ಎಚ್ಚೆತ್ತ ಸಿಎಂ, ಕೂಡಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಬ್ಬರು ಸಚಿವರ ಸಮ್ಮುಖದಲ್ಲಿ ಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪಾರ್ಥಮಿಕ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಇದ್ದ ಗೊಂದಲಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮವಾಗಿ ತೆರೆ ಎಳೆದಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರು ನಡೆಸುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ. ಸಚಿವರೊಂದಿಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ಸಿಎಂ ಸಮ್ಮಿಸಿದ್ದಾರೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕೂಡಾ ನಿರ್ಧರಿಸಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ” LKG ಮತ್ತು UKG ತರಗತಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭಿಸಲು ಸಿಎಂ ಒಪ್ಪಿದ್ದು, ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು ಸೂಚಿಸಿದ್ದಾರೆ. ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ತಜ್ಞರ ಸಮಿತಿಯನ್ನು ರಚಿಸಲಾಗುತ್ತದೆ. ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಅಂಗನವಾಡಿ ಕೇಂದ್ರಗಳಲ್ಲೇ ಕಾನ್ವೆಂಟ್ ಮಾದರಿಯ ತರಗತಿಗಳನ್ನು ಪ್ರಾರಂಭಿಸಲಾಗುತ್ತದೆ. ಕನ್ನಡ ಮತ್ತು ಇಂಗ್ಲಿಷ್ ಎರಡು ಮಾಧ್ಯಮಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ನೀಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ” ಎಂದು ಹೇಳಿದರು