Vijayalakshmi Darshan: ರೇಣುಕಾಸ್ವಾಮಿ ಕೂಲೆ ಅರೋಪ ಎದುರಿಸುತ್ತಿರುವ ನಟ ದರ್ಶನ್ ಜೈಲು ಸೇರಿರುವುದು ಅವರ ಅಭಿಮಾನಿಗಳಲ್ಲಿ ತೀವ್ರ ನೋವುಂಟು ಮಾಡಿದೆ.
ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್ ಅವರನ್ನು ನೋಡಬೇಕು ಎಂದು ಅನೇಕ ಅಭಿಮಾನಿಗಳು ಪ್ರತಿ ದಿನವು ಜೈಲಿನ ಬಳಿ ಹಂಬಲಿಸುತ್ತಿದ್ದಾರೆ. ಅದರೆ ಪೋಲಿಸ್ ಅಧಿಕಾರಿಗಳು ಅವರ ಕುಟುಂಬದವರನ್ನು ಬಿಟ್ಟು ಬೇರೆ ಯಾರಿಗೂ ಭೇಟಿಗೆ ಅವಕಾಶ ನೀಡುವುದಿಲ್ಲ ಹೀಗಾಗಿ ನಟ ದರ್ಶನ್ ಅಭಿಮಾನಿಗಳು ಮಾಧ್ಯಮಗಳ ಮುಂದೆ ತಮ್ಮ ಸಿಟ್ಟು ಕೋಪವನ್ನು ಹೊರಗೆ ಹಾಕುತ್ತಿದ್ದಾರೆ.
ಈಗ ದರ್ಶನ್ ಅವರ ಜೊತೆ ಮಾತನಾಡಿ ಬಂದಿರುವ ಪತ್ನಿ ವಿಜಯಲಕ್ಷ್ಮಿ ಅವರು ದರ್ಶನ್ ಅಭಿಮಾನಿಗಳಿಗೆ ಒಂದು ಸಂದೇಶ ನೀಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದ ಮೂಲಕ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅಭಿಮಾನಿಗಳನ್ನು ಉದ್ದೇಶಿಸಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನಲ್ಲಿ ‘ನನ್ನ ಪ್ರೀತಿಯ ಸಹೋದರರೇ.. ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ ‘ಸೆಲೆಬ್ರಿಟಿಗಳನ್ನು’ ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ’ ಎಂದು ಅಭಿಮಾನಿಗಳು ಕುರಿತು ಬರೆದುಕೊಂಡಿದ್ದಾರೆ.
Vijayalakshmi Darshan Instagram Post Link
‘ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದ ಇರೋಣ. ನಾನು ನಿಮ್ಮ ಆತಂಕವನ್ನು ದರ್ಶನ್ ಅವರಿಗೆ ತಲುಪಿಸಿದ್ದೇನೆ ಎಂದು ತಿಳಿಸಿದ್ದಾರೆ.
‘ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸ ಇಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮಯದಲ್ಲಿ ದರ್ಶನ್ ಅವರ ಅನುಪಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ’ ಎಂದು ವಿಜಯಲಕ್ಷ್ಮಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.