Today School Holiday News: ಮಳೆಯ ಅಬ್ಬರ ಜೋರಾಗಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದೆ. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದು, ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 24 ಗಂಟೆ ಕಾಲ ಭರ್ಜರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಖಾಲೆಯು ನೀಡಲಾಗಿದೆ. ಗುಡುಗು & ಸಿಡಿಲು ಸಹಿತ ಮಳೆ ಬೀಳಲಿದ್ದು ಭಾರಿ ಮುನ್ನೆಚ್ಚರಿಕೆ ವಹಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 27ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಮುಂಗಾರು ಮಳೆ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ಕೊಡಗಿನಲ್ಲೂ ಸಹ ನಿನ್ನೆ (ಜೂನ್ 26) ಎಡಬಿಡದೆ ಸುರಿದ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ಇನ್ನು ಈ ವರ್ಷಧಾರೆ ಇಂದು ಕೂಡಾ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 27ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶವನ್ನು ಹೊರಡಿಸಿದ್ದಾರೆ. ಅಂಗನವಾಡಿಗಳಿಗೆ ಕೂಡ ರಜೆ ಘೋಷಣೆ ಮಾಡಲಾಗಿದೆ.
ಕೊಡಗಿನಲ್ಲಿ ನಾಳೆ ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸುವಂತೆ ಜಿಲ್ಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಇದರ ಮೇರೆಗೆ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಿದ್ದಾರೆ.
ಹವಾಮಾನ ಇಲಾಖೆ ಪ್ರಕಾರ, ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವವು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಮೇಲೆ ಆಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನ ಕರ್ನಾಟಕ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅತ್ಯಧಿಕ ಮಳೆ ಆಗಲಿದೆ. ಮೀನುಗಾರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದ್ದು. ಈ ಕಾರಣದಿಂದ ಈ ಮೂರು ಜಿಲ್ಲೆಗಳಿಗೆ ನಾಳೆ ಇಂದು (ಜೂನ್ 27) ರಂದು ಒಂದು ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.