Jio New Plan: ಭಾರತದ ಪ್ರಮುಖ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ತನ್ನ ಎಲ್ಲಾ ರಿಚಾರ್ಜ್ ಪ್ಲ್ಯಾನ್‌ಗಳ ಕುರಿತು ಬೆಲೆ ಹೆಚ್ಚಳವನ್ನು ಘೋಷಣೆ ಮಾಡಿದೆ. ಹೊಸ ಪ್ಲ್ಯಾನ್‌ಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಸುಮಾರು ಎರಡೂವರೆ ವರ್ಷಗಳ ನಂತರ ಜಿಯೋ ಮೊಬೈಲ್ ಸೇವೆಗಳ ದರಗಳಲ್ಲಿ ಮೊದಲ ಹೆಚ್ಚಳವಾಗಿದೆ. ದೇಶದಲ್ಲಿ ಗರಿಷ್ಠ ಪ್ರಮಾಣದ ಮೊಬೈಲ್ ಗ್ರಾಹಕರನ್ನು ಹೊಂದಿರುವ ಜಿಯೋ ತಮ್ಮ 19 ಪ್ಲ್ಯಾನ್‌ಗಳಿಗೆ ಬೆಲೆ ಏರಿಕೆ ಮಾಡಿದೆ. ಇದರಲ್ಲಿ 17 ಪ್ರೀಪೇಡ್ ಪ್ಲ್ಯಾನ್‌ಗಳಾಗಿದ್ದು, ಎರಡು ಪೋಸ್ಟ್‌ಪೇಡ್ ಪ್ಲ್ಯಾನ್‌ಗಳಾಗಿವೆ. ಯಾವೆಲ್ಲಾ ಪ್ಲ್ಯಾನ್‌ಗಳ ಬೆಲೆ ಏರಿಕೆ ಮಾಡಲಾಗಿದೆ ಅನ್ನೋದರ ವಿವರ ಇಲ್ಲಿದೆ.
ಈಗಾಗಲೇ ಪೆಟ್ರೋಲ್, ಡೀಸೆಲ್, ಹಾಲು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಲ್ಲಿದ್ದ ಜನಸಾಮಾನ್ಯರಿಗೆ ಈಗ ಅಗತ್ಯ ಸೇವೆಯಾಗಿರುವ ಮೊಬೈಲ್ ರಿಚಾರ್ಜ್ ಮೇಲೆ ಬೆಲೆ ಏರಿಕೆ ಮಾಡಿದ್ದರಿಂದ ಒಂದೇ ತಿಂಗಳಲ್ಲಿ ಗ್ರಾಹಕರ ಜೇಬಿಗೆ 40 ರೂಪಾಯಿ ಬರೆ ಬೀಳಲಿದೆ.
ಭಾರತದಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ತನ್ನ ವಿವಿಧ ರಿಚಾರ್ಜ್ ಪ್ಲಾನ್ ಗಳ ಮೂಲಕ ಜನರನ್ನು ಆಕರ್ಷಿಸುವ ರಿಲಯನ್ಸ್ ಜಿಯೋ ಟೆಲಿಕಾಂ ಕಂಪನಿಯು ಇದೀಗ ತನ್ನ ಪ್ರಿಪೇಡ್ ರಿಚಾರ್ಜ್ ಪ್ಲಾನ್ ಗಳ ಬೆಲೆಯನ್ನು ಏರಿಸಲಿದೆ. 155 ರೂಪಾಯಿಯ ರಿಚಾರ್ಜ್ ಪ್ಲ್ಯಾನ್ 189 ರೂಪಾಯಿಗೆ ಏರಿಕೆ ಮಾಡಲಾಗಿದ್ದು ವ್ಯಾಲಿಡಿಟಿ ಮಾತ್ರ 28 ದಿನಗಳಿಗೆ ಇರಲಿದೆ. ಇನ್ನು 209 ರೂಪಾಯಿಯ ರಿಚಾರ್ಜ್ ಪ್ಲ್ಯಾನ್ 249 ರೂಪಾಯಿ ಆಗಲಿದೆ. ಇದರಲ್ಲಿ 40 ರೂಪಾಯಿ ಏರಿಕೆಯಾಗಿದೆ. ಇದರ ವ್ಯಾಲಿಡಿಟಿ ಕೂಡ 28 ದಿನ ಇರಲಿದೆ. ಅನಿಯಮಿತ 5G ಡೇಟಾವನ್ನು ನೀಡುತ್ತಿದ್ದ ರೂ239 ಪ್ಲಾನ್ ಈಗ ರೂ 299 ವೆಚ್ಚವಾಗಲಿದೆ ಮತ್ತು 28 ದಿನಗಳವರೆಗೆ ಮಾನ್ಯವಾಗಿರುತ್ತದೆ. ಹೊಸ ಯೋಜನೆಗಳು ಜುಲೈ 3, 2024 ರಿಂದ ಜಾರಿಗೆ ಬರಲಿವೆ. ರಿಲಯನ್ಸ್ ಜಿಯೋ ಕೂಡ ಹೊಸ ಸೇವೆಗಳನ್ನು ಪ್ರಾರಂಭಿಸಿದೆ.
ಜಿಯೋ ಸೇಫ್ (JioSafe): ಕರೆ, ಸಂದೇಶ ಕಳುಹಿಸುವಿಕೆ ಮತ್ತು ಫೈಲ್ ವರ್ಗಾವಣೆಗಾಗಿ ಕ್ವಾಂಟಮ್-ಸುರಕ್ಷಿತ ಸಂವಹನ ಅಪ್ಲಿಕೇಶನ್ ಬಿಡುಗಡೆ ಮಾಡಿದ್ದು, ಬಳಕೆದಾರರು ತಿಂಗಳಿಗೆ 199 ರೂಪಾಯಿ ಪಾವತಿಸಿ ಬಳಸಬಹುದಾಗಿದೆ.
ಜಿಯೋ ಭಾಷಾಂತರ (JioTranslate): ಧ್ವನಿ ಕರೆಗಳು, ಸಂದೇಶಗಳು, ಪಠ್ಯ ಮತ್ತು ಚಿತ್ರಗಳನ್ನು ಭಾಷಾಂತರಿಸಲು ಎಐ-ಚಾಲಿತ ಬಹು-ಭಾಷಾ ಸಂವಹನ ಅಪ್ಲಿಕೇಶನ್ ಕೂಡ ಬಿಡುಗಡೆಯಾಗಲಿದ್ದು, ಇದನ್ನು ಬಳಸಲು ತಿಂಗಳಿಗೆ 99 ರೂಪಾಯಿ ಪಾವರಿ ಮಾಡಬೇಕಾಗುತ್ತದೆ.