ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣವು(Gruha lakshmi 11th Installment Date 2024) ಇಂದು ಅಥವಾ ನಾಳೆ ಮನೆಯ ಯಜಮಾನಿಯ ಖಾತೆಗೆ ವರ್ಗಾವಣೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರದ ಎಲ್ಲಾ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂದು ಸಾಕಷ್ಟು ಜನರು ಆತಂಕ ಪಟ್ಟಿದ್ದರು. ಈ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯ ಯಜಮಾನಿ ಖಾತೆಗೆ ಪ್ರತಿ ತಿಂಗಳು 2000ರೂ ನೀಡಲಾಗುತ್ತಿತ್ತು. ಆದರೆ ಕಳೆದ ಎರಡು ತಿಂಗಳಿಂದ ಖಾತೆಗೆ ಹಣ ಬಂದಿಲ್ಲ ಎನ್ನುವ ಆರೋಪಗಳು ಬಂದಿವೆ.
ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ” ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಲಾಗಿದೆ ಎಂದು ತಿಳಿಸಿದ್ದಾರೆ. ಇಂದು ಅಥವಾ ನಾಳೆ ಗೃಹಲಕ್ಷ್ಮಿ ಹಣ ಯಜಮಾನಿಯ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ನಂತರ ಮಾತನಾಡುತ್ತಾ ವಿರೋಧಪಕ್ಷದ ಆರೋಪಕ್ಕೆ ಉತ್ತರಿಸಿದ ಅವರು “ಯಾವುದೇ ಸಂದರ್ಭದಲ್ಲಿ 5 ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ, ಸುಮ್ಮನೆ ಕಾರಣ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕೊಟ್ಟಾಗ 40% ಕಮಿಷನ್ ತೆಗೆದುಕೊಂಡು ಮನೆಯಲ್ಲಿ ಕುಳಿತರು” ಇಂದು ಹೇಳುವ ಮೂಲಕ ವಿರೋಧ ಪಕ್ಷಗಳಿಗೆ ಕಡಕ್ ಉತ್ತರ ನೀಡಿದರು.
ಇನ್ನೂ ಹಲವರ ಖಾತೆಗೆ ಹಣ ವರ್ಗಾವಣೆ ಆಗುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರ ನೀಡುತ್ತಾ “ಇನ್ನೂ ಸಾಕಷ್ಟು ಜನ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದರೂ ಕೂಡ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಕೊಂಡಿಲ್ಲ. ಆದ್ದರಿಂದ ಅಂತಹವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು” ಇಂದು ಫಲಾನುಭವಿಗಳಿಗೆ ಸಲಹೆ ನೀಡಿದರು.