ಇತರೆ ರಾಜ್ಯಗಳಿಂದ ಕರ್ನಾಟಕದ ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳುತ್ತಿರುವವರು ಸಂಖ್ಯೆ ಹೆಚ್ಚಾಗಿದೆ. ವಲಸೆ ಕೆಲಸಗಾರರು ರಾಜ್ಯದಲ್ಲಿ ತೀವ್ರ ಸಂಖ್ಯೆ ಹೆಚ್ಚಳವಾಗಿದ್ದು ಆದ್ದರಿಂದ ಕರ್ನಾಟಕದ ಯುವಕ ಯುವತಿಯರಿಗೆ ಉದ್ಯೋಗಗಳೇ ಸಿಗದಂತಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡಿಗರಿಗಾಗಿ ಖಾಸಗಿ ವಲಯಗಳಲ್ಲಿ ಉದ್ಯೋಗ ಮತ್ತು ಮೀಸಲಾತಿಯನ್ನು ನೀಡುವಂತೆ ಆಗ್ರಹಿಸಿ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ನಾಳೆ ಬೃಹತ್ ಬೃಹತ್ ಪ್ರತಿಭಟನೆ ನಡೆಯಲಿದೆ.
ನಾಳೆ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಪ್ರತಿಭಟನೆ ಮಾಡಲಾಗುತ್ತದೆ. ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮತ್ತು ಮೀಸಲಾತಿ ಕುರಿತಂತೆ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರವೇ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಯನ್ನು ನಡೆಸಲು ಕರೆ ನೀಡಲಾಗಿದೆ.
ಇತರೆ ರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಉದ್ಯೋಗ ಹರಸಿ ಬರುವವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ ಇದರಿಂದ ಸ್ಥಳೀಯ ಕನ್ನಡಿಗರಿಗೆ ಖಾಸಗಿ ವಲಯಗಳಲ್ಲಿ ಉದ್ಯೋಗಗಳು ಸಿಗುತ್ತಿಲ್ಲ. ಹೀಗಾಗಿ ಕರವೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿದೆ.
ರಾಜ್ಯದ ಖಾಸಗಿ ಕೈಗಾರಿಕೆಗಳಲ್ಲಿ ಬಲಿಷ್ಠ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು, ರಾಜ್ಯ ಸರ್ಕಾರಿ ಸಂಸ್ಥೆ ಮತ್ತುಸಾರ್ವಜನಿಕ ವಲಯದಲ್ಲಿ 100% ಕನ್ನಡಿಗರಿಗೆ ಮೀಸಲಾತಿ,ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಸಿ ಹಾಗೂ ಡಿ ಹುದ್ದೆಗಳಲ್ಲಿ 100% ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎಂದು ಇನ್ನೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.