Anganwadi: ಸರ್ಕಾರದಿಂದ ಗುಡ್ ನ್ಯೂಸ್; ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆ

By Aishwarya

Published On:

Follow Us

Anganwadi: ರಾಜ್ಯ ಸರ್ಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಾದ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆಗೆ ಚಿಂತನೆ ನಡೆಸುತ್ತಿದ್ದು ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದೆ.

ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ಹಲವಾರು ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅವರು “ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ಸರ್ಕಾರ ತೀರ್ಮಾನಿಸಿದೆ.‌ ಕರ್ನಾಟಕ ಪಬ್ಲಿಕ್ ಶಾಲೆ (ಕೆ ಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಎಂದು ಹೇಳಿದರು.

Dengue Fever: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ; ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ

ಕರ್ನಾಟಕ ಸರ್ಕಾರವು ನೂತನವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿ ನಡೆಸಲು ಚಿಂತನೆ ನಡೆಸುತ್ತಿದ್ದು. LKG ಮತ್ತು‌ UKG ತರಗತಿಗಳನ್ನು ಪ್ರಾರಂಭಿಸುವಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈಗಾಗಲೇ ತರಗತಿಗಳಿಗೆ ಶಿಕ್ಷಕರನ್ನು ನೇಮಿಸಿಕೊಳ್ಳಲು ಅಧಿಸೂಚನೆಯನ್ನು ಸಿದ್ಧಗೊಳಿಸಲಾಗುತ್ತಿದ್ದು ಶೀಘ್ರವೇ ನೇಮಕಾತಿ ಅಧಿಸೂಚನೆ ಕೂಡ ಹೊರಬೀಳಲಿದೆ. ಸರ್ಕಾರವು ಶಾಲೆಗಳಲ್ಲಿ UKG ಮತ್ತು UKG ತರಗತಿಗಳನ್ನು ಆದೇಶವನ್ನು ಹೊರಡಿಸಲಾಗಿತ್ತು. ಈ ಆದೇಶದ ವಿರುದ್ಧ ಅನೇಕ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿ ಆದೇಶವನ್ನು ವಾಪಸ್ ತೆಗೆಯುವಂತೆ ಆಗ್ರಹಿಸಿದರು. ಈ ಪ್ರತಿಭಟನೆಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವಂತೆ ಸೂಚಿಸಿದರು.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow