ಇನ್ನೂ ಮುಂದೆ ರಾಜ್ಯದ CBSE, ICSE, ಅಂತರರಾಷ್ಟ್ರೀಯ ಮಂಡಳಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯಾ ಭಾಷಯಾಗಿ ಭೋದಿಸಬೇಕು ಎಂದು ಸರ್ಕಾರವು ಕಡ್ಡಾಯಗೊಳಿಸಿದೆ.
ಶಾಲೆಗಳಿಗೆ ಕುರಿತಂತೆ ನಿಯಮಗಳಿಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರವು ರಾಜ್ಯ ಪತ್ರವನ್ನು ಹೊರಡಿಸಲಾಗಿದೆ. ಈ ನಿಯಮವನ್ನು ಎಲ್ಲಾ CBSE, ICSE ಕೇಂದ್ರೀಯ ಪಠ್ಯಕ್ರಮದ ಎಲ್ಲ ಸರ್ಕಾರಿ ಶಾಲೆಗಳು ಈ ನಿಯಮವನ್ನು ಅನುಸರಿಸಿದರೆ ಮಾತ್ರ ಖಾಸಗಿ ಶಾಲೆಗಳನ್ನು ನಡೆಸಲು ರಾಜ್ಯ ಸರ್ಕಾರದ ನಿರಾಕ್ಷೇಪನೆ ಪತ್ರ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಈ ಹಿಂದೆ ಕೇಂದ್ರೀಯ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಹಾಗೂ ದ್ವಿತೀಯ ಭಾಷೆಯನ್ನಾಗಿ ಬೋಧಿಸಬೇಕು ಎಂಬ ನಿಯಮ ಮಾಡಲಾಗಿತ್ತು. ಆದರೆ ಆ ನಿಯಮಕ್ಕೆ ತಿದ್ದುಪಡಿ ತಂದು ಕನ್ನಡವನ್ನು ದ್ವಿತೀಯ ಮತ್ತು ತೃತೀಯ ಭಾಷೆಯನ್ನಾಗಿ ಅಭ್ಯಾಸ ಮಾಡುವುದಾಗಿ ಕರಡು ನಿಯಮ ನಿರೂಪಿಸಿ 2022 ರಲ್ಲಿ ಜಾರಿಗೊಳಿಸಲಾಗಿತ್ತು. ಈ ನಿರ್ಧಾರದ ಮೇಲೆ ರಾಜ್ಯದ ಎಲ್ಲಾ ಕನ್ನಡ ಪರ ಸಂಘಟನೆಗಳು, ಕನ್ನಡ ಸಾಹಿತ್ಯ ಪರಿಷತ್, ಕಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಹೀಗಾಗಿ ರಾಜ್ಯ ಸರ್ಕಾರವು ಮೊದಲಿನಂತೆ ಕನ್ನಡವನ್ನು ಪ್ರಥಮ ಆಗೋ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕು ಎಂದು ಸರ್ಕಾರವು ಅಧಿಕೃತ ರಾಜ್ಯ ಪತ್ರವನ್ನು ಹೊರಡಿಸಲಾಗಿದೆ.