ಇಡೀ ದೇಶಕ್ಕೆ ಮಾದರಿಯಾಗುವ ಕರ್ನಾಟಕದ ಅಂಗನವಾಡಿ ಕೇಂದ್ರಗಳನ್ನು ವಿನೋದಿಕರಣ ಮಾಡುವ ಮೂಲಕ ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ(LKG&UKG) ತರಗತಿಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು. 30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸವನ್ನು ಮಾಡುವೆ. ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತಿಕರಣಕ್ಕೆ ಕಾರಣ, ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆ ಇಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು.
ಸಮಾಜಕ್ಕೆ ಅಂಗನವಾಡಿಗಳ ಕೊಡುಗೆ ಅಪಾರ. ಕಡೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿಕೊಂಡು ಬರುತ್ತಿವೆ. ಇನ್ನು ಮುಂದೆ ಗೌರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಿದ್ದು ಇತರೆ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆರಿಗೆ ಇನ್ಸೂರೆನ್ಸ್ ನೀಡುವ ಕುರಿತು ಶೀಘ್ರವೇ ತೀರ್ಮಾನಿಸಲಾಗುವುದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಲಾಗುವುದು. ಗೌರವದನ ಹೆಚ್ಚಳದ ಬಗ್ಗೆಯೂ ಚರ್ಚೆ ನಡೆಸಿ ಶೀಘ್ರವೇ ಕಾರ್ಯರೂಪಕ್ಕೆ ತರುವ ಕೆಲಸ ಆಗಲಿದೆ ಎಂದು ತಿಳಿಸಿದರು.