School College Holiday: ಜೂನ್ 4 ರಂದು ದೇಶಾದ್ಯಂತ ಶಾಲಾ ಕಾಲೇಜುಗಳು ಬಂದ್

By Aishwarya

Published On:

Follow Us

School College Holiday: ಜುಲೈ 4 ರಂದು ದೇಶಾದ್ಯಂತ ಶಾಲಾ–ಕಾಲೇಜು ಎಂಟು ಬೇಡಿಕೆಗಳ ಈಡೇರಿಕೆ ಸಲುವಾಗಿ ಬಂದ್ ಗೆ ಕರೆ ನೀಡಿವೆ. ಕೇಂದ್ರ ಕಾರ್ಯಕಾರಿ ಸಮಿತಿಯು ಮತ್ತು ವಿವಿಧ ವಿದ್ಯಾರ್ಥಿ ಸಂಘಟನೆಗಳು ಜುಲೈ 4 ರಂದು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದೆ.

ನೀಟ್ ಮತ್ತು ನೆಟ್ ಪರೀಕ್ಷೆಗಳ ಪತ್ರಿಕೆ ಸೋರಿಕೆ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು ಜುಲೈ 4 ರಂದು ದೇಶಾದ್ಯಂತ ಶಾಲಾ-ಕಾಲೇಜು ಬಂದ್‌ಗೆ ಕರೆ ನೀಡಿವೆ. ಎನ್ ಟಿಎ ರದ್ದು ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಎಸ್ ಐಎಫ್, ಎಐಎಸ್ ಎಫ್, ಪಿಡಿಎಸ್ ಯು, ಪಿಡಿಎಸ್ ಒ, ಎನ್ ಎಸ್ ಯುಐ ವಿದ್ಯಾರ್ಥಿ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ 65 ಪ್ರಶ್ನಾ ಪತ್ರಿಕೆಗಳ ಸೋರಿಕೆ ಘಟನೆಗಳು ನಡೆದಿದ್ದು, ಪೇಪರ್ ಸೋರಿಕೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಿ ನ್ಯಾಯ ಕೊಡಿಸುವಂತೆ ಮೋದಿ ಅವರನ್ನು ಕೋರಿದ್ದಾರೆ.

ಎಂಟು ಬೇಡಿಕೆಗಳ ಮೇಲೆ ಈ ಬಂದ್ ನಡೆಯಲಿದ್ದು, ಎನ್ ಟಿಎ ಪದ್ಧತಿಯನ್ನು ರದ್ದುಪಡಿಸಬೇಕು ಮತ್ತು ನೀಟ್ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಇದಲ್ಲದೆ, ವಿಶ್ವವಿದ್ಯಾನಿಲಯಗಳು, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಸಂಶೋಧನಾ ಸಂಸ್ಥೆಗಳಲ್ಲಿ ಪಿಎಚ್ ಡಿ ಪ್ರವೇಶಕ್ಕಾಗಿ ಇತ್ತೀಚೆಗೆ ಅನುಮೋದಿಸಲಾದ ಕಡ್ಡಾಯ ನೆಟ್ ಸ್ಕೋರ್ ವ್ಯವಸ್ಥೆಯನ್ನು ಹಿಂಪಡೆಯಲು ವಿದ್ಯಾರ್ಥಿ ಸಂಘಗಳು ಒತ್ತಾಯಿಸಿವೆ.

ಈ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ವಿದ್ಯಾರ್ಥಿ ಲೋಕಂ ಬಂದ್‌ನಲ್ಲಿ ಭಾಗವಹಿಸಿ, ತರಗತಿ ಬಹಿಷ್ಕರಿಸಿ, ರ್ಯಾಲಿ ಮತ್ತು ಪ್ರತಿಭಟನೆ ನಡೆಸುವಂತೆ ಕರೆ ನೀಡಲಾಗಿದೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow