ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ “ಸಿ” ಪಂಚಾಯತಿ ಅಭಿವೃದ್ಧಿ ಅಧಿಕಾರಿ(PDO) ಒಟ್ಟು 247 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರವು ವಯೋಮಿತಿಯಲ್ಲಿ ಸಡಿಲಿಕೆ ನೀಡಿದ್ದರಿಂದ ಮರು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾಂಭವಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
PDO Recruitment 2024 Application
ಯಾರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿಯು ಕನಿಷ್ಠ 18 ಮತ್ತು ಗರಿಷ್ಠ- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ– 38 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ- 41 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ – 43 ವರ್ಷ ಹೊಂದಿರಬೇಕು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು https://kpsconline.karnataka.gov.in/ ಗೆ ಭೇಟಿ ನೀಡಿ.