Free Manasa Sarovara Yatra: ರಾಜ್ಯ ಸರ್ಕಾರವು ಕರ್ನಾಟಕದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಅನುದಾನವನ್ನು ಪಡೆಯಲು ಅರ್ಜಿ ಸಲ್ಲಿಕೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ.ಸಹಾಯಧನ ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಮುಜರಾಯಿ ಇಲಾಖೆ ಪ್ರಕಟಿಸಿದೆ. ಅಧಿಕೃತ ವೆಬ್ಸೈಟ್ನಲ್ಲಿ ಹೆಚ್ಚಿನ ಮಾಹಿತಿ ನೀಡಲಾಗಿದೆ.
ಮಾನಸ ಸರೋವರ ಯಾತ್ರಾರ್ಥಿಗಳಿಗೆ ತಲಾ 30 ಸಾವಿರ ರೂ, ಚಾರ್‌ಧಾಮ್ (ಗಂಗೋತ್ರಿ ಯಮುನೋತ್ರಿ, ಕೇದಾರ್‌ನಾಥ್, ಬದರೀನಾಥ್) ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ 20 ಸಾವಿರ ರೂ, ಕಾಶಿ ಯಾತ್ರೆ ಕೈಗೊಂಡ 30,000 ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ ಪಾವತಿಸಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಮುಜರಾಯಿ ಇಲಾಖೆ ಪ್ರಕಟಿಸಿದೆ.
ಕಾಶಿ ಯಾತ್ರೆಗೆ ಮಾರ್ಗಸೂಚಿಗಳು
- ಕರ್ನಾಟಕದ ಕಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ.
- ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್ ಒಂದಕ್ಕೆ 18 ವರ್ಷಗಳ ಮೇಲ್ಪಟ್ಟಿರಬೇಕು.
- 18ನೇ ವಯಸ್ಸಿನ ಕೆಳಗಿನವರ ಪರಿಗಣಿಸಲಾಗುವುದಿಲ್ಲ, 18 ವರ್ಷ ಮೇಲ್ಪಟ್ಟ ಜಾತ್ರೆಗಳು ಎಸ್ ಕೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಹಾಜರುಪಡಿಸಬೇಕು.
- ಯಾತ್ರಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸುವುದಿಲ್ಲ.
ಕೈಲಾಸ ಮಾನಸ ಸರೋವರ ಯಾತ್ರೆಯ ಮಾರ್ಗಸೂಚಿಗಳು
- ಕರ್ನಾಟಕದ ಕಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ.
- ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡ ಯಾತ್ರಾತ್ರಿಗಳು ಸರ್ಕಾರದ ಸಹಾಯಧನ ಪಡೆಯಲು ಇಚ್ಚಿಸಿದಲ್ಲಿ, ಆಯಾ ಆರ್ಥಿಕ ಸಾಲಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ನಿಗದಿಪಡಿಸಲಾಗುವ ದಿನಾಂಕದ ಒಳಗೆ ಅಗತ್ಯ ದಾಖಲೆಗಳೊಂದಿಗೆ 25 ರೂ. ಶುಲ್ಕಗಳನ್ನು ಪಾವತಿಸಿ ಸಂಬಂಧಪಟ್ಟ ವೆಬ್ಸೈಟ್ ಅಥವಾ ಮೊಬೈಲ್ ಆಪ್ ನ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
- ಯಾತ್ರೆಯನ್ನು ಕೈಗೊಳ್ಳುವ ಬಗ್ಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಸುವ ಮತ್ತು ಸದರಿ ಅರ್ಜಿಯ ಬಗ್ಗೆ ಸಂಬಂಧಿಸಿದ ಪ್ರತಿಕ್ರಿಯೆಗಳಿಗೆ ತಗಲುವ ಸಂಪೂರ್ಣ ವೆಚ್ಚವನ್ನು ಹಾಗೂ ಚೀನಾ ದೇಶಕ್ಕೆ ಪಾವತಿಸಬೇಕಾಗುವ ಮೊತ್ತವನ್ನು ಸಂಬಂಧಪಟ್ಟ ಯಾತ್ರೆಗಳೇ ಭರಿಸಬೇಕು.
ಚಾರ್ ಧಾಮ್ ಯಾತ್ರಿಗಳಿಗೆ ಮಾರ್ಗಸೂಚಿಗಳು
- ಕರ್ನಾಟಕದ ಕಾಯಂ ನಿವಾಸಿಗಳು ಮಾತ್ರ ಈ ಸಹಾಯಧನ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ.
- 45 ವರ್ಷ ಮೇಲ್ಪಟ್ಟ ಯಾತ್ರಿಗಳು ಮಾತ್ರ ಈ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.
- 45 ವರ್ಷ ಮೇಲ್ಪಟ್ಟ ಯಾತ್ರಿಗಳು ತಮ್ಮ ವಯಸ್ಸಿನ ದೃಢೀಕರಣಕ್ಕಾಗಿ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
- ಯಾತ್ರೆಗಳು ಒಂದು ಬಾರಿ ಸಹಾಯಧನ ಪಡೆದ ನಂತರದಲ್ಲಿ ಅದೇ ವ್ಯಕ್ತಿಗೆ ಇನ್ನೊಂದು ಬಾರಿ ಸಹಾಯಧನ ನೀಡಲಾಗುವುದಿಲ್ಲ.