ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ಗಳು ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತವೆ. ಇದೀಗ ಕೋಲಾರದಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಕೋಲಾರದ ಹೊರವಲಯದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯು ಏಕಾಏಕಿ ಹೊಟ್ಟೆ ನೋವು ಎಂದು ಶೌಚಾಲಯಕ್ಕೆ ತೆರಳಿದ್ದಾರೆ. ಬಳಿಕ ಅಲ್ಲಿಯೇ ಹೆರಿಗೆ ನೋವಿನಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. .
ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ವಿದ್ಯಾರ್ಥಿನಿಯನ್ನು ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಕೃತ್ಯಕ್ಕೆ ಕಾರಣವಾದ ವ್ಯಕ್ತಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
1 thought on “ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ”