ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದಲ್ಲಿ ಭಾರಿ ಮಳೆ ಆಗುತ್ತಿದ್ದು, ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮಳೆಯಿಂದ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.
ಹಾವೇರಿಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಅವಾಂತರಗಳೇ ಸೃಷ್ಟಿಯಾಗಿದೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಚೆನ್ನಮ್ಮ (30), ಅಮೂಲ್ಯ (3), ಅನನ್ಯಾ (6) ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಗಳನ್ನು ಸವಣೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಆಗುತ್ತಿದ್ದು. ಈ ಕುಟುಂಬದ ಆರು ಜನ ಒಂದೇ ಕಡೆ ಮಲಗಿದ್ದರು ಇಂದು (ಜುಲೈ 19) ನಸುಕಿನ ವೇಳೆ ಸುಮಾರು 3:30ರ ಸಮಯದಲ್ಲಿ ಆರು ಜನರ ಮೇಲೆ ಗೋಡೆ ಬಿದ್ದಿದೆ. ಅದರಲ್ಲಿ ಮೂರು ಜನರು ಸ್ಥಳದಲ್ಲಿ ಮೃತಪಟ್ಟಿದ್ದು, ವೃದ್ಧೆ ಯಲ್ಲಮ್ಮ, ಪುತ್ರ ಮುತ್ತು, ಸೊಸೆ ಸುನೀತಾ ತೀವ್ರ ಗಾಯಗಳಾಗಿವೆ.
ವಾಯುಭಾರ ಕುಸಿತದ ಹಿನ್ನಲೆ ರಾಜ್ಯದಲ್ಲಿ ಇನ್ನೂ ಒಂದುವಾರ ಮಳೆಯಾಗಲಿದ್ದು, ಪ್ರಾಖೃತಿಕ ವಿಕೋಪಗಳಿಂದ ಮುನ್ನೆಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ. ಶಿಥಿಲ ಕಟ್ಟಡಗಳು, ಗುಡ್ಡಗಳು ಕುಸಿಯುವ ದುರ್ಘಟನೆಗಳು ರಾಜ್ಯದಲ್ಲಿ ಹೆಚ್ಚಾಗಿವೆ, ಜನರು ಸುರಕ್ಷಿತ ಸ್ಥಳದಲ್ಲಿ ಇರುವಂತೆ ಹವಾಮಾನ ಇಲಾಖೆ ತಿಳಿಸಿದೆ.