ನಟ ದರ್ಶನ್ ಮತ್ತು ರೇಣುಕಾ ಸ್ವಾಮಿಯ ಕೊಲೆ ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ನಟ ಉಪೇಂದ್ರ ಒಬ್ಬ ಸಾರ್ವಜನಿಕ ವ್ಯಕ್ತಿಯ ಪ್ರಕರಣಗಳನ್ನು ತನಿಖೆ ನಡೆಸುವಾಗ ಸಾರ್ವಜನಿಕವಾಗಿ ಪಾರದರ್ಶಕತೆಯಿಂದ ನಡೆಸಬೇಕು ಇದರಿಂದ ಮಾಧ್ಯಮ ಮತ್ತು ಅಭಿಮಾನಿಗಳು, ಜನರ ಅನೇಕ ಗೊಂದಲಗಳಿಗೆ ಉತ್ತರ ಸಿಗುತ್ತದೆ ಎಂದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
ರೇಣುಕಾ ಸ್ವಾಮಿಯ ಕೊಲೆಯ ಪ್ರಕರಣ ಮತ್ತು ನಟ ದರ್ಶನ್ ತನಿಖೆಯ ವಿಚಾರಣೆಯನ್ನು ಕರ್ನಾಟಕವಲ್ಲದೆ ಇಡೀ ದೇಶವೇ ಬೆರಗಾಗಿ ನೋಡುತ್ತಿದೆ. ಇಂತಹ ಹೈ ಪ್ರೊಫೈಲ್ ಕೇಸ್ ಗಳಲ್ಲಿ ನಿಷ್ಪಕ್ಷಪಾತವಾದ ನಿರ್ಣಯ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.
ಟಿವಿ ಮಾಧ್ಯಮಗಳಲ್ಲಿ, ರೇಣುಕಾ ಸ್ವಾಮಿ ಕುಟುಂಬದಲ್ಲಿ, ದರ್ಶನ್ ಅಭಿಮಾನಿಗಳು ಹಾಗೂ ಜನರಲ್ಲಿ ಏನೇನು ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ, ಯಾಕೆಂದರೆ ಯಾವುದೇ ಕೇಸ್ ಆದರೂ ಅ ಕೇಸ್ ನ ದಾಖಲೆಗಳ ಮತ್ತು ಸಾಕ್ಷಿಗಳು ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂದ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು.
ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು, ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು.
ಈ ರೀತಿಯಾಗಿ ಮಾಡಿದರೆ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆ ಪೋಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ. ಎಂದು ನಟ ಉಪೇಂದ್ರ ತಮ್ಮ ಸಮಾಜಿಕ ಜಾಲತಾಣಗಳಲ್ಲಿ ನಟ ದರ್ಶನ್ ಪ್ರಕರಣದ ಕುರಿತು ಬರೆದುಕೊಂಡಿದ್ದಾರೆ.