Suraj Revanna: ರಾಜ್ಯದ ಜೆಡಿಎಸ್ ನ ಪ್ರಬಲ ನಾಯಕರಾದ ಎಚ್.ಡಿ ರೇವಣ್ಣ ಕುಟುಂಬದ ಮೇಲೆ ಒಂದರ ಮೇಲೊಂದು ಆರೋಪಗಳು ಕೇಳಿ ಬರುತ್ತಿವೆ. ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಈಗಾಗಲೇ ನ್ಯಾಯಾಂಗ ಬಂಧನ ಅನುಭವಿಸುತ್ತಿದ್ದು ಈ ಪ್ರಕರಣವು ಇಡೀ ದೇಶದಲ್ಲೇ ಚರ್ಚೆ ಆಗಿತ್ತು. ಆದರೆ ಇದೀಗ ಪ್ರಜ್ವಲ್ ರೇವಣ್ಣನವರ ಅಣ್ಣ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.
ಪ್ರಜ್ವಲ್ ರೇವಣ್ಣನವರ ಪ್ರಕರಣದ ಬೆನ್ನೆಲೇ ಇದೀಗ ಸೂರಜ್ ರೇವಣ್ಣನವರ ವಿರುದ್ಧ ಅರಕಲಗೂಡು ಜೆಡಿಎಸ್ ಕಾರ್ಯಕರ್ತ , ಗೃಹ ಸಚಿವ ಹಾಗೂ ಡಿಜಿ ಮತ್ತು ಐಜಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸೂರಜ್ ರೇವಣ್ಣನವರು ಜೂನ್ 16 ರಂದು ಸಹಾಯ ಮಾಡುವುದಾಗಿ ತಮ್ಮ ಪಕ್ಷದ ಕಾರ್ಯಕರ್ತನನ್ನು ತೋಟದ ಮನೆಗೆ ಕರೆಸಿಕೊಂಡು ವಿಚಿತ್ರ ವ್ಯಕ್ತಿಯಲ್ಲಿ ವರ್ತಿಸಿ, ಬಲವಂತವಾಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪ್ರಜ್ವಲ್ ರೇವಣ್ಣನವರ ಪ್ರಕರಣವು ರಾಜ್ಯದಲ್ಲಿ ದೇವೇಗೌಡರ ಕುಟುಂಬದ ರಾಜಕೀಯ ವರ್ಚಸ್ಸನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಿತ್ತು ಹೀಗಿರುವಾಗಲೇ ಸೂರಜ್ ವಿರುದ್ಧ ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಸದ್ಯ ಜೆಡಿಎಸ್ ನಲ್ಲಿ ವಿಧಾನಪರಿಷತ್ ಸದಸ್ಯ ಸ್ಥಾನದಲ್ಲಿರುವ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಸುಮಾರು 14ರಿಂದ 15 ಪುಟದ ದೂರು ಸಲ್ಲಿಸಿರುವುದಾಗಿ ವರದಿಯಾಗಿದೆ.
ದೌರ್ಜನ್ಯಕ್ಕೆ ಒಳಗಾದ ಯುವಕನು ಈಗಾಗಲೇ ಪೊಲೀಸ್ ರಿಗೆ ದೂರನ್ನು ನೀಡಲಾಗಿದ್ದು ದೂರಿನಲ್ಲಿ ದೌರ್ಜನ್ಯಕ್ಕೆ ಒಳಗಾದ ಯುವಕನ ದೇಹದ ಹಲವು ಭಾಗಗಳಲ್ಲಿ ಕಚ್ಚಿದ ಗುರುತುಗಳಿವೆ, ಮರ್ಮಾಂಗದಲ್ಲೂ ಗಾಯವಾಗಿದೆ ಎಂದು ವರದಿಯಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣವು ಇನ್ನೂ ಸುದ್ದಿಯಲ್ಲಿರುವಾಗಲೇ ವಿಧಾನ ಪರಿಷತ್ ಸದಸ್ಯರಾದ ಡಾ ಸೂರಜ್ ರೇವಣ್ಣನವರ ಪ್ರಕರಣ ಬೆಳಕಿಗೆ ಬಂದಿದೆ.