Death Of PSI News: ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: ಪಿಎಸ್ಐ ಅನುಮಾನಾಸ್ಪದ ಸಾವು, ಸಿಐಡಿಗೆ ಕೇಸ್ ವರ್ಗಾವಣೆ

By Aishwarya

Published On:

Follow Us

Death Of PSI News: ಯಾದಗಿರಿ ಮೂಲದ ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಕಾಂಗ್ರೆಸ್‌ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರನಿಗೆ ಸಂಕಷ್ಟ ಎದುರಾಗಿದೆ. ಹಗರಣಗಳ ಸುಳಿಯ ಆರೋಪಕ್ಕೆ ಸಿಲುಕಿರುವ ರಾಜ್ಯ ಸರ್ಕಾರಕ್ಕೆ ಮತ್ತೊಂದು ಉರುಳು ಸುತ್ತಿಕೊಂಡಂತಾಗಿದೆ.

ಶಾಸಕ ಚೆನ್ನರೆಡ್ಡಿ ಪುತ್ರ ಪಂಪಣ್ಣಗೌಡ ಜೈಲಿಗೆ ಹೋಗಬೇಕು ಎಂದು ಮೃತ ಪಿಎಸ್ಐ ಪತ್ನಿ ಶ್ವೇತಾ ಅವರು ಜೈಲಿಗೆ ಹೋಗುವುದನ್ನು ನಾನು ಮತ್ತು ನನ್ನ ಮಗ ಟಿವಿಯಲ್ಲಿ ನೋಡಬೇಕು ಎಂದು ಮಾಧ್ಯಮಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾದಗಿರಿ ನಗರ ಪೊಲೀಸ್ ಠಾಣೆಯ ಪೋಸ್ಟಿಂಗ್ಗಾಗಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ 30 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಹೀಗಾಗಿ ಪರಶುರಾಮ 30ಲಕ್ಷ ರೂ. ನೀಡಿ ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್ ಅವರನ್ನು ಮತ್ತೆ‌ ಯಾದಗಿರಿ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಒತ್ತಡಕ್ಕೆ ಒಳಗಾಗಿದ್ದ ಪಿಎಸ್ಐ ಪರಶುರಾಮ ಸಾಲದ ಸುಳಿಗೆ ಸಿಲುಕಿದ್ದರು ಎನ್ನಲಾಗಿದೆ.

ಇದರ ನಡುವೆ ಪಿಎಸ್ಐ ಸಾವಿನ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಯಾದಗಿರಿ ಸೋಮನಾಳಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಭೇಟಿ ನೀಡಲಿದ್ದು, ಕುಟುಂಬಕ್ಕೆ ಸಾಂತ್ವನ ಹೇಳದಿದ್ದಾರೆ, ಈ ಪ್ರಕರಣ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ. ಸರ್ಕಾರದ ವಿರುದ್ಧ ಪಾದಯಾತ್ರೆ ನಡೆಯುತ್ತಿರುವ ಈ ಸಂದರ್ಭದಲ್ಲೇ ಈ ಪ್ರಕರಣವನ್ನು ಬಳಸಿಕೊಂಡು ಮತ್ತಷ್ಟು ಇಕ್ಕಟ್ಟಿಗೆ ಸಿಲುಕುವ ಸಿದ್ಧತೆಯನ್ನು‌ ವಿರೋಧ ಪಕ್ಷಗಳು ಮಾಡಿಕೊಂಡಿವೆ.

ಚನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರ ಪಂಪಣ್ಣಗೌಡ 30 ರಿಂದ 40 ಲಕ್ಷ ಹಣ ಕೇಳಿದ್ದಾರೆ ಅನ್ನೋ ಆರೋಪ ಮಾಡಲಾಗಿದ್ದು, ಹೆಚ್ಚಿನ ತನಿಖೆಗಾಗಿ ಈ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow