ಬೆಂಗಳೂರು : ಕೊಲ್ಕತ್ತಾದ ವೈದ್ಯ ಯುವತಿಯ ಲೈಂಗಿಕ ಪ್ರಕರಣವು ದೇಶದಲ್ಲಿದೆ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಇದರ ನಡುವೆಯೇ ರಾಜ್ಯದಲ್ಲಿ ಮತ್ತೊಂದು ಲೈಂಗಿಕ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಹೀನಾಯ ಕೃತ್ಯ ನಡೆದಿದ್ದು, ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ರೇಪ್ ಆಗಿದೆ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಆಟೋ ಚಾಲಕನಿಂದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ
ನೆರೆ ರಾಜ್ಯದ 21 ವರ್ಷದ ಯುವತಿ ನಗರದ ಖಾಸಗಿ ಕಾಲೇಜಿನಲ್ಲಿ ಬಿಬಿಎಂ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದು, ಹೆಬ್ಬಗೋಡಿಯಲ್ಲಿ ವಾಸವಾಗಿದ್ದಾರೆ. ಕೋರಮಂಗಲದಲ್ಲಿ ಪಾರ್ಟಿಯ ಸಲುವಾಗಿ ಸ್ನೇಹಿತರೊಂದಿಗೆ ಪಬ್ಗೆ ಹೋಗಿದ್ದರು. ಅಲ್ಲಿ ಮೋಜು-ಮಸ್ತಿ ಬಳಿಕ ಮನೆಗೆ ತೆರಳುವಾಗ ಎಲ್ಲಾ ಸ್ನೇಹಿತರಿದ್ದ ಕಾರು ಕೋರಮಂಗಲದಲ್ಲಿ ಆಟೋವೊಂದಕ್ಕೆ ಡಿಕ್ಕಿ ಹೊಡೆದಿದೆ.
ಸ್ಥಳದಲ್ಲಿ ಮಾತಿನ ಚಕಮಕಿಗಳು ನಡೆದಿದ್ದು, ಅಲ್ಲಿಗೆ ಹೊಯ್ಸಳ ಪೊಲೀಸರು ಬಂದಿದ್ದಾರೆ. ಇದರಿಂದ ಗಾಬರಿಯಾದ ಯುವತಿ ನಾನು ಪೊಲೀಸರಿಗೆ ಸಿಕ್ಕಿಬಿದ್ದರೆ ಕುಡಿತದ ವಿಚಾರ ಗೊತ್ತಾಗಬಹುದೆಂಬ ಆತಂಕದಿಂದ ಸಂತ್ರಸ್ತ ವಿದ್ಯಾರ್ಥಿನಿ ಬೇರೆ ಆಟೋ ಹಿಡಿದು ಅಲ್ಲಿಂದ ಸ್ವಲ್ಪ ದೂರ ಮುಂದೆ ಹೋಗಿದ್ದಾರೆ. ನಂತರ ಮನೆಗೆ ತೆರಳಲು ಬೈಕ್ ಟ್ಯಾಕ್ಸಿ ಬುಕ್ ಮಾಡಿ ತರಳಿದ್ದಾಳೆ.
ಇದೇ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ ಹತ್ತಿದ್ದ ಯುವತಿಯನ್ನು ಬೊಮ್ಮನಹಳ್ಳಿ ಸಮೀಪದ ಗೋದಾಮು ಬಳಿ ಕರೆದುಕೊಂಡು ಹೋಗಿ ರೇಪ್ ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಸದ್ಯ ಯುವತಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂತ್ರಸ್ಥೆ ಅರೆ ಪ್ರಜ್ಞಾವಸ್ಥೆಯಲ್ಲಿ ತನ್ನ ಸ್ನೇಹಿತೆಗೆ ಕರೆ ಮಾಡಿದ್ದು ಸ್ನೇಹಿತೆ ಬಂದು ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾಳೆ. ಈ ವೇಳೆ ವೈದ್ಯರು ಯುವತಿಯನ್ನು ಪರೀಕ್ಷಿಸಿದಾಗ ಆಕೆಯ ಮೇಲೆ ಅತ್ಯಾಚಾರವಾಗಿರೋದು ಗೊತ್ತಾಗಿದೆ. ಆಸ್ಪತ್ರೆ ಸಿಬ್ಬಂದಿ ತಕ್ಷಣ ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು ಘಟನೆ ಸಂಬಂಧ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.