Rain Alert: ಕರಾವಳಿಯಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗುತ್ತಿದ್ದು, ಇನ್ನು ಐದು ದಿನಗಳ ಕಾಲ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಇನ್ನೂ ಐದು ದಿನಗಳ ಕಾಲ ಎಲ್ಲೋ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಎಲ್ಲೋ ಅಲರ್ಟ್ ಮತ್ತು ಜುಲೈ 12 ರಿಂದ 14 ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಜುಲೈ 11 ರಿಂದ 14ರವರೆಗೆ ಎಲ್ಲೋ ಅಲರ್ಟ್, ಉಳಿದಂತೆ ಕಲ್ಬುರ್ಗಿ, ಧಾರವಾಡ, ಬೀದರ್ ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಜುಲೈ 14ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಂಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜುಲೈ 12 ರಿಂದ ಮೂರು ದಿನಗಳ ಕಾಲ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ 10 ರಿಂದ 14ರ ವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಮಳೆ ಆಗುವ ಸಾಧ್ಯತೆ ಇದೆ
ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ಕೋಲಾರದಲ್ಲೂ ಮಳೆ ಅಬ್ಬರ ಗ್ಯಾರಂಟಿ ಹೆಚ್ಚಾಗಲಿದ್ದು. ಬೆಂಗಳೂರಲ್ಲಿ, 3-4 ದಿನ ಕಾಲ ಮೋಡ ಕವಿದ ವಾತವರಣ ಇರಲಿದ್ದು. ಜುಲೈ 11, 12 ಹಾಗೂ 13 ರಂದು ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಎಲ್ಲಾ ಸಾಧ್ಯತೆ ದಟ್ಟವಾಗಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಎಚ್ಚರಿಕೆ ವಹಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.