ರಾಜ್ಯದಲ್ಲಿ ಮುಂಗಾರು ಹಲವೆಡೆ ಬಿರುಸಿನ ಮಳೆ(Rain Alert) ಸುರಿಸುತ್ತಿದ್ದರೆ, ಇನ್ನೂ ಕೆಲವಡೆ ಮಳೆಯ ಕೊರತೆ ಉಂಟಾಗಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಉತ್ತಮ ಮಳೆ ಆಗುತ್ತಿದೆ. ಮುಂದುವರೆದಂತೆ ಹವಾಮಾನ ಇಲಾಖೆಯು ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆ ಆಗಲಿದೆ, ಹಾಗಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ರೆಡ್, ಆರೆಂಜ್, ಎಲ್ಲೋ ಅಲರ್ಟ್ ಘೋಷಿಸಿ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.
ಅದರಂತೆ ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಇದೇ ಜುಲೈ.17ರವರೆಗೂ ಭಾರಿ ಮಳೆ ಆಗಲಿದೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಉಳಿದಂತೆ ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ ,ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲೂ ಭಾರಿ ಮಳೆಯ ಜೊತೆಗೆ ಗಾಳಿಯು ಕೂಡ ಬೀಸುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.