KRS DAM : ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಭಾರಿ ಮಳೆಯಾಗುತ್ತಿದ್ದು, ಕೆ.ಆರ್.ಎಸ್ ಡ್ಯಾಂ ಭರ್ತಿಯಾಗಿದೆ. ಒಂದುವರೆ ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದ್ದು, ಕನ್ನಡ ನಾಡಿನ ಜೀವನದಿ ಕಾವೇರಿ ತುಂಬಿ ಹರಿಯುತ್ತಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು.
ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ಮಳೆರಾಯನ ಆರ್ಭಟಕ್ಕೆ ಮಂಡ್ಯ ಜಿಲ್ಲೆ ಶ್ರೀರಂಗಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದಾಳೆ.
ಈ ಹಿನ್ನಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲುಕಿನ ಕೆ.ಆರ್.ಎಸ್ ಜಲಾಶಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೂರನೇ ಬಾರಿಗೆ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ, ಹೆಚ್.ಸಿ .ಮಹದೇವಪ್ಪ ಕೂಡ ಬಾಗಿನ ಅರ್ಪಿಸಿದರು.
ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ 2023ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು ಬಾಗಿನ ಅರ್ಪಿಸಿದ್ದಾರೆ.