ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆಯುತ್ತಿದ್ದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಐದು ದಿನದಿಂದಲೂ ಎಡೆಬಿಡದೆ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ದೊಡ್ಡ ಪ್ರಮಾಣದ ಮಳೆ ಆಗಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿದೆ. ಹಾಗಾಗಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ, ಪದವಿ ಮತ್ತು ಮುಂತಾದ ತರಗತಿಗಳು ಎಂದಿನಂತೆ ನಡೆಯಲಿದೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಎರಡು ತಾಲೂಕಿನ ಶಾಲಾ ಕಾಲೇಜ್ಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಭಾರೀ ಮಳೆಯಿಂದ ಶರಾವತಿ ಮತ್ತು ಗುಂಡಬಾಳ ನದಿ ಉಕ್ಕಿ ಹರಿಯುತ್ತಿವೆ. ನದಿ ತೀರದ ಗ್ರಾಮಗಳ ಸೇತುವೆಗಳು ಕುಸಿದಿದ್ದು, ನದಿ ಪಾತ್ರದ ಮನೆಗಳಿಗೂ ಕೂಡ ಹಾನಿಯಾಗಿದೆ.
ಮನೆಯ ಜೊತೆಗೆ ವೇಗವಾಗಿ ಬೀಸುತ್ತಿರುವ ಗಾಳಿಯ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ನದಿ, ಸಮುದ್ರ ತೀರದ ಜನ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮುಂದುವರೆದ ಮಳೆ ಆರ್ಭಟ: ಈ ಜಿಲ್ಲೆಗಳಲ್ಲಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
By Aishwarya
Published On:
For Feedback - feedback@khnewstimes.com