ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ವಿಧಾನಪರಿಷತ್ ಜೆಡಿಎಸ್ ಸದಸ್ಯ ಸೂರಜ್ ರೇವಣ್ಣ(Suraj Revanna)ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ಕೋರ್ಟ್ ಇದೀಗ ಎಂಎಲ್ಸಿ ಸೂರಜ್ ರೇವಣ್ಣಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 23 ರಂದು ಸೂರಜ್ ರೇವಣ್ಣ ಬಂಧನವಾಗಿತ್ತು. ಕಳೆದ 29 ದಿನಗಳ ಕಾಲ ಸೂರಜ್ ರೇವಣ್ಣ ಜೈಲುವಾಸ ಅನುಭವಿಸುತ್ತಿದ್ದರು.
ನ್ಯಾಯಾಲಯ ವಿಧಿಸಿದ ಷರತ್ತುಗಳು
ಪ್ರತಿ ಎರಡನೇ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗಿ ಸಹಿ ಹಾಕಬೇಕು. 2 ಲಕ್ಷ ರೂಪಾಯಿ ಹಾಗೂ ಇಬ್ಬರು ಶ್ಯೂರಿಟಿ ಹಾಕಬೇಕು. ಪಾಸ್‌ಪೋರ್ಟ್ ಸರಂಡರ್ ಮಾಡಬೇಕು. ಅರ್ಜಿದಾರರು ಯಾವುದೇ ರೀತಿಯಲ್ಲಿ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ಆರು ತಿಂಗಳ ಅವಧಿಗೆ ಅಥವಾ ಚಾರ್ಜ್ ಶೀಟ್ ಸಲ್ಲಿಸುವವರೆಗೆ ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು ಎಂದು ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.