Darshan Arrest: ದರ್ಶನ್ ಬಂಧನ: ನಟಿ ರಚಿತಾ ರಾಮ್ ಮೊದಲ ಪ್ರತಿಕ್ರಿಯೆ

By Aishwarya

Published On:

Follow Us

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನಗೊಂಡು ಸುಮಾರು ಒಂದು ವಾರಕ್ಕೂ ಹೆಚ್ಚಾಗಿದ್ದು, ಇದೀಗ ಸ್ಯಾಂಡಲ್ ವುಡ್ ನ ತಾರೆಯರು ಒಬ್ಬೊಬ್ಬರಾಗಿ ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳುತ್ತಿದ್ದಾರೆ.

ಈ ಹಿಂದೆಯಷ್ಟೇ ನಟ ಸುದೀಪ್, ಉಪೇಂದ್ರ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದರು. ಈಗ ಆ ಸಾಲಿಗೆ ನಟಿ ರಚಿತಾ ರಾಮ್ ಕೂಡ ಸೇರಿಕೊಂಡಿದ್ದು, ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ.

ದರ್ಶನ್ ರನ್ನು ಮೈ ಹೀರೋ ಎಂದೇ ಹೇಳಿಕೊಳ್ಳುತ್ತಿದ ರಚಿತಾ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ನೋಟ್‌ ಅನ್ನು ನಾನು ನಟಿಯಾಗಿ ಅಲ್ಲ ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತಿಚೆಗೆ ನಡೆದ ಪ್ರಕರಣದ ಬಗ್ಗೆ ನಾನು ಮಾತನಾಡುತ್ತಿದ್ದೇನೆ. ಮೊದಲಿಗೆ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಭಗವಂತ ಧೈರ್ಯ ತುಂಬಿ ನೋವು ಭರಿಸುವ ಶಕ್ತಿ ನಿಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ’ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನೋಟ್ ಅನ್ನು ಮುಂದುವರೆಸಿರುವ ನಟಿ ‘ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್. ದರ್ಶನ್ ಅವರು ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಅವರು. ಅಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ.
ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೆ ನನ್ನ ನಂಬಿಕೆ. ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತಿರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆ’ ಎಂದು ಹೇಳಿದ್ದಾರೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow