Delete Phonepe: ರಾಜ್ಯದಲ್ಲಿ ಡಿಲೀಟ್ ಫೋನ್ ಪೇ ಅಭಿಯಾನ

By Aishwarya

Published On:

Follow Us

ರಾಜ್ಯದಲ್ಲಿ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ನೀಡುವ ಮಸೂದೆವು ಸಚಿವ ಸಂಪುಟದಲ್ಲಿ ಚರ್ಚೆಯಾಗುತ್ತಿದ್ದಂತೆ ಫೋನ್ ಪೇ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ರಾಜ್ಯದಲ್ಲಿ ಹಲವು ಕನ್ನಡ ಪರ ಸಂಘಟನೆಗಳು ಫೋನ್ ಪೇ(Phone pay) ವಿರುದ್ಧ #boycottphonepay ಅಭಿಯಾನ ಶುರು ಮಾಡಿದ್ದಾರೆ.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್‌ ಪೇ ವಿರುದ್ಧ #Boycottphonepay ಅಭಿಯಾನ ಶುರುವಾಗಿದೆ. ಕನ್ನಡಿಗರು ಈ ಅಪ್ಲಿಕೇಷನ್ ಬಳಸಬೇಡಿ ಎಂದು ಕರೆ ನೀಡಲಾಗಿದೆ. ಫೋನ್ ಪೇ ಗೆ ಕಡಿಮೆ ರೇಟಿಂಗ್ ನೀಡಿ ಡಿಲೀಟ್(Delete Phonepe) ಮಾಡಿ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಫೋನ್ ಪೇ CEO ಸಮೀರ್ ನಿಗಮ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ “ನನಗೆ ಈಗ 46 ವರ್ಷ. 15 ವರ್ಷಕ್ಕಿಂತ ಹೆಚ್ಚು ಕಾಲ ಯಾವ ರಾಜ್ಯಗಳಲ್ಲಿಯೂ ಉಳಿದಿಲ್ಲ. ನನ್ನ ತಂದೆ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಅವರನ್ನು ದೇಶದಾದ್ಯಂತ ವಿವಿಧ ಸ್ಥಳಗಳಲ್ಲಿ ನಿಯೋಜನೆ ಮಾಡುತ್ತಿದ್ದರು. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?. ನಾನು ಒಂದು ಸಂಸ್ಥೆಯನ್ನು ಕಟ್ಟಿದ್ದೇನೆ, ದೇಶದಾದ್ಯಂತ 25 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದೇನೆ. ನನ್ನ ಮಕ್ಕಳು ಅವರ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?’ ಎಂದು ಉದ್ಯೋಗ ಮೀಸಲಾತಿ ವಿರುದ್ಧ ಬರೆದುಕೊಂಡಿದ್ದರು.

ಈ ಪೋಸ್ಟ್ ನೋಡಿದ ಕನ್ನಡಿಗರು ಫೋನ್ ಪೇ ಅಪ್ಲಿಕೇಶನ್ ಅನ್ನು ಡಿಲೀಟ್ ಮಾಡಲು ಅಭಿಯಾನ ಆರಂಭಿಸಿದ್ದಾರೆ. ಹಲವು ಕನ್ನಡಪರ ಸಂಘಟನೆಗಳು ಫೋನ್ ಪೇ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ರಾಜ್ಯದಲ್ಲಿ ಉದ್ಯೋಗ ಮೀಸಲಾತಿ ಕುರಿತು ವಿಧಾನಸಭೆಯಲ್ಲಿ ಮಸೂದೆಯು ಮಂಡನೆಯಾಗಿಲ್ಲ, ಮಸೂದೆ ಜಾರಿಗೆ ತರಲು ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಲಾಗಿದೆ. ಮಸೂದೆಯ ಕುರಿತು ಸಾಧಕ ಬಾಧಕಗಳನ್ನು ಪರಿಶೀಲಿಸುತ್ತಿರುವ ಸರ್ಕಾರ ಯಾವಾಗ ಮಸೂದೆಯನ್ನು ಜಾರಿಗೆ ತರುತ್ತದೆ ಎಂದು ಕಾದುನೋಡಬೇಕಾಗಿದೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow