Dengue Fever: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ; ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ

By Aishwarya

Updated On:

Follow Us

Karnataka Dengue fever: ವಾತಾವರಣದಲ್ಲಿ ಬದಲಾವಣೆ ಕಂಡುಬಂದ ಕಾರಣ ಸಾಮಾನ್ಯವಾಗಿ ಶೀತ ನೆಗಡಿ, ಕೆಮ್ಮು, ಜ್ವರ ಕಳುಹಿಸಿಕೊಳ್ಳುತ್ತಿದ್ದು ಹಿನ್ನಲೆ ರಾಜ್ಯದಲ್ಲಿ ಡೆಂಗ್ಯೂ ಜ್ವರದ ಪ್ರಮಾಣ ಏರಿಕೆ ಆಗುತ್ತಾ ಹೋಗುತ್ತಿದೆ.
ಕಳೆದ ಎರಡು ವಾರಗಳಿಂದ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಿಗೆ ಕಂಡುಬಂದಿದ್ದು,ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯಲ್ಲೂ ಏರಿಕೆ ಕಂಡಿದೆ.  ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ಹೆಚ್ಚಿನ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಆರೋಪ ಕೇಳಿಬರುತ್ತದೆ.

ಡೆಂಗಿ ಪ್ರಕರಣಗಳು ಹೆಚ್ಚಾದ ಕಾರಣ ಜಲಸಾಮಾನ್ಯರು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಯು ಉಚಿತವಾಗಿ ಮಾಡಲಾಗುತ್ತಿದೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಹೆಚ್ಚಿನ ವೆಚ್ಚವನ್ನು ವಸೂಲಿ ಮಾಡಲಾಗುತ್ತಿದ್ದು ಮನಬಂದಂತೆ ಪರೀಕ್ಷಾ ಶುಲ್ಕ ವನ್ನು ವಿಧಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು ಹೆಚ್ಚು ಶುಲ್ಕ ವಿಧಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Also Read: ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

ಸಚಿವರು ಈ ವಿಷಯದ ಕುರಿತು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಆಸ್ಪತ್ರೆಗೆ ಅನ್ವಯವಾಗುವಂತೆ ಆರೋಗ್ಯ ಇಲಾಖೆಯು ಆಸ್ಪತ್ರೆಗಳಿಗೆ ಆದೇಶ ಹೊರಡಿಸಲಾಗಿದೆ.ಡೆಂಗ್ಯೂ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್ ರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ‌ ಎಂದು ಸೂಚಿಸಲಾಗಿದೆ.

ಡೆಂಗ್ಯೂ ನಿಯಂತ್ರಣ ಕ್ರಮಗಳ ಕುರಿತು ಆರೋಗ್ಯ ಸಚಿವರು ಎಲ್ಲ ಜಿಲ್ಲಾಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಅಗತ್ಯ ಮುಂಜಾಗೃತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.ಡೆಂಗ್ಯೂ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ನೀಡಿ ಎಂದು ಆರೋಗ್ಯ ಸಚಿವರು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

1 thought on “Dengue Fever: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ; ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ ದುಬಾರಿ ಶುಲ್ಕ ವಸೂಲಿ”

  1. Pingback: Anganwadi: ಸರ್ಕಾರದಿಂದ ಗುಡ್ ನ್ಯೂಸ್; ಅಂಗನವಾಡಿ ಮಕ್ಕಳಿಗೆ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆ - KH News Times

Leave a Comment

Follow