ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾಗಿದ್ದ 7ನೇ ವೇತನ ಆಯೋಗದ ಜಾರಿಯ ಕುರಿತು ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಂಡಿದೆ. ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ತೀರ್ಮಾನವನ್ನು ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು, ನೆನ್ನೆ ನಡೆದ (ಜುಲೈ 15) ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರ ಒಪ್ಪಿಗೆ ಮೇರೆಗೆ ಆಗಸ್ಟ್ 1 ರಿಂದ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಕಾತುರದಿಂದ ಕಾಯುತ್ತಿದ್ದ 7ನೇ ವೇತನ ಆಯೋಗದ ವರದಿಯು ಆಗಸ್ಟ್ 1 ರಿಂದಲೇ ಜಾರಿಗೆ ಬರಲಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಈ ಹಿನ್ನಲೆ ಎಚ್ಚೆತ್ತುಕೊಂಡ ಸರ್ಕಾರ ಸಚಿವ ಸಂಪುಟ ಸಭೆ ನಡೆಸಿ ಒಮ್ಮತದ ತೀರ್ಮಾನ ಕೈಗೊಂಡಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಶೇ 27.5 ರಷ್ಟು ಜಾಸ್ತಿಯಾಗಲಿದೆ.
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದ ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಮಾರ್ಚ್ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಲಾಗಿತ್ತು. ವರದಿಯ ಅನ್ವಯ ಇದರ ಅನ್ವಯ, ರಾಜ್ಯ ಸರ್ಕಾರಿ ನೌಕರರಿಗೆ ಶೇ.8 ರಿಂದ ಶೇ.8.5ರಷ್ಟು ಅಂತಿಮ ವೇತನ ಹೆಚ್ಚಳ ದೊರೆಯಬಹುದಾಗಿದೆ. ಒಟ್ಟಾರೆ, ಮೂಲವೇತನದ ಶೇ.25 ರಿಂದ ಶೇ.27.5ರಷ್ಟು ಏರಿಕೆ ಸಾಧ್ಯವೆಂದು ನಿರೀಕ್ಷಿಸಲಾಗಿದೆ.
ಶೇ.27.5ರಷ್ಟು ವೇತನ ಪರಿಷ್ಕರಣಿಗೆ ಆಯೋಗವು ಶಿಫಾರಸು ಮಾಡಿದ್ದು, 2023ರ ಮಾರ್ಚ್ ನಿಂದ ಶೇಕಡ 17ರಷ್ಟು ಮಧ್ಯಂತರ ಪರಿಹಾರ ನೀಡಲಾಗಿತ್ತು. ಇನ್ನು ಶೇಕಡ 10.5 ರಷ್ಟು ವೇತನ ಹೆಚ್ಚಳವಾಗಬೇಕಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 7500 ಕೋಟಿ ಹೆಚ್ಚುವರಿ ಹೊರೆಯಾಗಲಿದೆ.