Gruhalakshmi Amount: ಮಹಿಳೆಯರಿಗೆ ಗುಡ್ ನ್ಯೂಸ್ ….!ಇಂದಿನಿಂದ ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

By Aishwarya

Published On:

Follow Us

Gruhalakshmi Amount: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವು ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಬಂದಿರಲಿಲ್ಲ, ಆದರೆ ಇದೀಗ ಯೋಜನೆಯ ಫಲಾನುಭವಿಗಳಿಗೆ ಇಂದಿನಿಂದ(ಆಗಸ್ಟ್ 6) ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಇಂದು ಮಂಡ್ಯದಲ್ಲಿ ನಡೆದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದ ವೇಳೆ ಮಾತನಾಡಿದ ಅವರು ಇಂದೇ ಗೃಹಲಕ್ಷ್ಮಿ ಯೋಜನೆ ಹಣ. ಬಿಡುಗಡೆಯಾಗಲಿದ್ದು, ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂದೇ ಜಮಾ ಮಾಡಲಾಗುವುದು. ಎರಡು ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಲವು ತಾಂತ್ರಿಕ ತೊಂದರೆಯಿಂದ ಸರ್ಕಾರ ಜೂನ್ ತಿಂಗಳ ಮಹಾಲಕ್ಷ್ಮಿ ಹಣ ಜಮಾ ಮಾಡಿರಲಿಲ್ಲ, ಇದೀಗ ಸರ್ಕಾರ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ. ಇನ್ನು ಮುಂದೆ ಪ್ರತಿ ತಿಂಗಳು 15 ರ ಒಳಗೆ ಗೃಹಲಕ್ಷ್ಮಿ ಹಣ ಚಮ ಆಗಲಿದೆ ಎಂದು ಹೇಳಿದರು.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow