ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದ ಗುಡ್ ನ್ಯೂಸ್: ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲೇ ಜನನ ಮರಣ ಪತ್ರ ಲಭ್ಯ!

By Aishwarya

Published On:

Follow Us

Birth and Death Certificate: ಜನನ ಮತ್ತು ಮರಣ ಪತ್ರಕ್ಕಾಗಿ ತಾಲೂಕು ಕಚೇರಿ ಅಥವಾ ಹೋಬಳಿಯ ಕಚೇರಿಗೆ ಅಲೆದಾಡುವಂತಿಲ್ಲ ಸರ್ಕಾರವು ಜನನ ಮರಣ ಪತ್ರಕ್ಕೆ ಸಂಬಂಧಿಸಿದ ನಿಯಮಾವಳಿಗಳಲ್ಲಿ ತಿದ್ದುಪಡಿ ಮಾಡಿ ಜನನ ಮರಣ ಪತ್ರವನ್ನು ಇನ್ನು ಮುಂದೆ ಗ್ರಾಮ ಗ್ರಾಮ ಪಂಚಾಯಿತಿಗಳಲ್ಲೇ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ನೊಂದಣಿಗಾಗಿ ಅವಕಾಶ ಮಾಡಲಾಗಿದೆ.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವುದರ ಬದಲಾಗಿ “ಗ್ರಾಮ ಪಂಚಾಯತಿ ಕಾರ್ಯದರ್ಶಿ ಇವರನ್ನು ಉಪನೋಂದಣಾಧಿಕಾರಿಯನ್ನಾಗಿ ನೇಮಿಸಿ ತಿದ್ದುಪಡಿಗೊಳಿಸಿಲಾಗಿದೆ.ಜನನ, ಮರಣ ಘಟನೆಗಳು ಘಟಿಸಿದ 30 ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧ ಪಟ್ಟ ಗ್ರಾಮ ಪಂಚಾಯತಿ ಕಾರ್ಯದರ್ಶಿ ಇವರನ್ನು ಸಂಪರ್ಕಿಸ ಬಹುದಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ ಪದ್ಧತಿಯನ್ನು ಬಲಪಡಿಸಲು ಹಾಗೂ ಘಟಿಸುವ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಜನನ, ಮರಣ ನೋಂದಣಿ ಅಧಿನಿಯಮ 1969ರ ಪ್ರಕರಣ 7(5) ರನ್ವಯ ಜನನ, ಮರಣ ಘಟನೆಗಳು ಘಟಿಸಿದ ಮೂವತ್ತು ದಿನಗಳವರೆಗಿನ ಘಟನೆಗಳನ್ನು ನೋಂದಾಯಿಸಲು ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ಹಾಗೂ ಪುಕರಣ 7(1) ರನ್ವಯ ಜನನ, ಮರಣ ಘಟನೆಗಳು ಸಂಭವಿಸಿದ ಮೂವತ್ತು ದಿನಗಳ ನಂತರದ ವಿಳಂಬ ನೋಂದಣಿಯನ್ನು ನೋಂದಾಯಿಸಲು ಗ್ರಾಮ ಆಡಳಿತ ಅಧಿಕಾರಿಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಉಲ್ಲೇಖಿತ (3) ರಲ್ಲಿ ಸರ್ಕಾರದ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಮೂಲಕ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಿದ್ದು, ಇದು ಜನನ ಮತ್ತು ಮರಣ ಪ್ರಮಾಣಗಳ ದಾಖಲೆ ಮಾಡಲು ಸಹ ಸುಲಭವಾಗಿದೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow