Dasara 2024: ಈ ಬಾರಿ ಅದ್ಧೂರಿ ದಸರಾ ಆಚರಣೆಗೆ‌ ಸರ್ಕಾರ ನಿರ್ಧಾರ: ಅಕ್ಟೋಬರ್ 3 ರಂದು ಉದ್ಘಾಟನೆ, ಅಕ್ಟೋಬರ್ 12ಕ್ಕೆ ಜಂಬೂಸಬಾರಿ

By Aishwarya

Published On:

Follow Us

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಈ ಬಾರಿ ಅದ್ಧೂರಿಯಾಗಿ ನಡೆಯಲಿದೆ. ದಸರಾ ಮಹೋತ್ಸವ ಉನ್ನತ ಮಟ್ಟದ ಸಮಿತಿ ಸಭೆ ಇಂದು ನಡೆಸಲಾಗಿದೆ.  ಈ ಬಾರಿ ಅದ್ದೂರಿ ಮೈಸೂರು ದಸರಾ(Dasara 2024) ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸಭೆಯ ಬಳಿಕ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಅದ್ದೂರಿಯಾಗಿ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಕಳೆದ ಬಾರಿ 30 ಕೋಟಿ ರೂ. ಆಗಿತ್ತು. ಈ ಬಾರಿ ಅದಕ್ಕಿಂತ ಹೆಚ್ಚು ಖರ್ಚು ಆಗಬಹುದು ಎಂದಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬಾರಿ ಅಕ್ಟೋಬರ್ 3ರಿಂದ 12ರವರೆಗೆ ಅದ್ಧೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅ.3ರಂದು ದಸರಾ ಉದ್ಘಾಟನೆ ನಡೆಯಲಿದೆ, 12 ರಂದು ಜಂಬೂಸವಾರಿ ನಡೆಯಲಿದೆ. ಯಾರಿಂದ ಉದ್ಘಾಟನೆ ಮಾಡಿಸಬೇಕು ಎಂದು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ತಿಳಿಸಿದರು.

ದಸರಾ ಹಬ್ಬದ ಆಚರಣೆ 2024

ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ ಎಂದರು.

ದಸರಾ ಉದ್ಘಾಟನೆ ದಿನವೇ ಸಾಂಸ್ಕೃತಿಕ ಕಾರ್ಯಕ್ರಮ, ದೀಪಾಲಂಕಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ಯುವ ಸಂಭ್ರಮ, ಕ್ರೀಡೆಗಳು ಎಲ್ಲವೂ ಆರಂಭವಾಗುತ್ತದೆ. ಅಲ್ಲಿ ಖಾಲಿ ಮಳಿಗೆಗಳು ಇರಬಾರದು. ಅವತ್ತೆ ಎಲ್ಲಾ ಮಳಿಗೆಗಳು ಭರ್ತಿಯಾಗಿರಬೇಕು. ವಸ್ತು ಪ್ರದರ್ಶನದಲ್ಲಿ ಸರ್ಕಾರದ ಕಾರ್ಯಕ್ರಮಗಳ ಸಾಧನೆಗಳನ್ನು ಪ್ರದರ್ಶನ ಮಾಡಬೇಕು. ಜಂಬೂಸವಾರಿ ಮುಗಿದ ಬಳಿಕವೂ 11 ದಿನ ದೀಪಾಲಂಕಾರ ಇರಲಿದೆ. ಒಟ್ಟು 21 ದಿನಗಳ ಕಾಲ ಮಾಡಲಿದ್ದು, ಆಕರ್ಷಣೆಯಿಂದ ಇರಬೇಕು ಎಂದು ಸಂಬಂಧಿಸಿದ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow