ಕರ್ನಾಟಕ ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣವು ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಜಮಾ(Gruhalakshmi June Amount Credited) ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ” ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯದ 98% ಮಹಿಳೆಯರು ನೊಂದಾಯಿಸಿಕೊಂಡಿದ್ದಾರೆ. ಇದುವರೆಗೂ ಎಲ್ಲಾ ತಿಂಗಳಿನ ಹಣವನ್ನು ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಜೂನ್ ತಿಂಗಳ ಹಣವು ಈ ವಾರದಲ್ಲೇ ತಮ್ಮ ಖಾತೆಗಳಿಗೆ ಜಮಾ ಆಗಲಿದೆ ಜುಲೈ ತಿಂಗಳ ಹಣವು ಕೂಡ ಮುಂದಿನ ದಿನಗಳಲ್ಲಿ ಬರುತ್ತದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕೆ ಕಾರಣವಾಗಿದೆ. ನಮ್ಮ ಸರ್ಕಾರ ಸಮಾಜದ ಅಭಿವೃದ್ಧಿಗೆ ಬದ್ಧವಾಗಿದೆ, ಪ್ರತಿ ಮನೆಯಲ್ಲೂ ಮಹಿಳೆ ಯಜಮಾನಿಯಾಗಿದ್ದಾಳೆ ಇದರ ಶ್ರೇಯಸ್ಸು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಯನ್ನು ಆಯೋಜಿಸಲು ಒಟ್ಟು 7 ಸಾವಿರ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು ತೀರ್ಮಾನಿಸಲಾಗಿದೆ. ಇದರ ಸಲುವಾಗಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ನುರಿತರಿಂದ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡಲಾಗುತ್ತದೆ. ಮಕ್ಕಳ ಸರ್ವತೋಮುಖ ಅಭಿವೃದ್ಧಿ ಮತ್ತು ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.