ಇನ್ನು ಮುಂದೆ ರಾಜ್ಯದ ಸರ್ಕಾರಿ ಸರ್ಕಾರಿ ಅನುದಾನಿತ ಖಾಸಗಿ ಮಕ್ಕಳ ಪಾಲನೆ ಸಂಸ್ಥೆಗಳಲ್ಲಿ ಹುಟ್ಟುಹಬ್ಬ ಆಚರಿಸುವುದನ್ನು ಸರ್ಕಾರವು ಬ್ಯಾನ್ ಮಾಡಿ ಆದೇಶವನ್ನು ಹೊರಡಿಸಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ ಶಾಲೆಯ ಸಿಬ್ಬಂದಿಗಳು, ಶಿಕ್ಷಕರು, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ರಾಜಕಾರಣಿಗಳ ಹುಟ್ಟುಹಬ್ಬ ಅಥವಾ ಅವರ ಮಕ್ಕಳ ಹುಟ್ಟುಹಬ್ಬವನ್ನು ಸರ್ಕಾರಿ ಶಾಲೆಗಳಲ್ಲಿ ಆಚರಿಸುವಂತಿಲ್ಲ ಎಂದು ರಾಜ್ಯ ಸರ್ಕಾರವು ಸುತ್ತೊಲೆಯನ್ನು ಹೊರಡಿಸಿದೆ.
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಅಥವಾ ಖಾಸಗಿ ವ್ಯಕ್ತಿಗಳ ಮಕ್ಕಳ ಜನ್ಮದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಕಂಡುಬಂದಿದೆ. ಇದು ಸಂಸ್ಥೆಯಲ್ಲಿ ವಾಸಿಸುವ ಮಕ್ಕಳಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತಿದೆ ಎಂಬ ಕಾರಣಕ್ಕೆ ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಸರ್ಕಾರಿ ಅನುದಾನಿತ ಖಾಸಗಿ ಮಕ್ಕಳ ಪಾಲನೆ ಸಂಸ್ಥೆಗಳಲ್ಲಿ ದಾಖಲಾಗಿರುವ ಮಕ್ಕಳು ಕಾನೂನಿನ ಅಡಿಯಲ್ಲಿ ದಾಖಲಾಗಿರುತ್ತಾರೆ. ಬಾಲಕಾರ್ಮಿಕ ಪದ್ಧತಿ, ಅಥವಾ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಗುರಿಯಾದ ಮಕ್ಕಳು, ತಂದೆ ತಾಯಿಯಿಂದ ತಿರಸ್ಕರಿಸಲ್ಪಟ್ಟ ಮಕ್ಕಳು, ಭಿಕ್ಷೆ ಬೇಡುವುದರಿಂದ ರಕ್ಷಿಸಿದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯು ಮಕ್ಕಳ ಪಾಲನ ಸಂಸ್ಥೆಗೆ ದಾಖಲು ಮಾಡಿಕೊಂಡಿರುತ್ತದೆ. ಹಾಗಾಗಿ ಈ ನಿಟ್ಟಿನಲ್ಲಿ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪಾಲನಾ ಸಂಸ್ಥೆಗಳಲ್ಲಿ ಸಿಬ್ಬಂದಿ ಅಥವಾ ಯಾವುದೇ ಖಾಸಗಿ ವ್ಯಕ್ತಿಯು ತನ್ನ ಹುಟ್ಟು ಹಬ್ಬದ ದಿನದಂದು ಕೇಕ್ ಕತ್ತರಿಸಿ ಸಿಹಿ ಹಂಚುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಈ ರೀತಿ ಮಾಡಿದರೆ ಅಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ನಮ್ಮ ಹುಟ್ಟುಹಬ್ಬವನ್ನು ಈ ರೀತಿಯಾಗಿ ಆಚರಿಸಲು ಆಚರಿಸಲು ಸಾಧ್ಯವಾಗದಿದ್ದರಿಂದ, ಮಕ್ಕಳ ಮನಸ್ಸಿನ ಮೇಲೆ ಪ್ರಭಾವ ಬೀರಿ ಮನಸ್ಸಿನ ದೌರ್ಬಲ್ಯಕ್ಕೆ ಕಾರಣವಾಗುತ್ತದೆ.
ಸಂಸ್ಥೆಯಲ್ಲಿ ವಾಸಿಸುವ ಮಕ್ಕಳು ಬೇರೆ ಯಾವುದೇ ಕುಟುಂಬದ ಮಕ್ಕಳಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಮೂಡಿಸಲು ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿದ್ದು ಇನ್ನು ಮುಂದೆ ಸರ್ಕಾರಿ ಶಾಲೆಗಳಲ್ಲಿ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪಾಲನ ಸಂಸ್ಥೆಗಳಲ್ಲಿ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು. ರಾಜಕೀಯ ಮುಖಂಡರುಗಳು, ಮಠಾಧೀಶರು ಇತ್ಯಾದಿ ತಮ್ಮ ಅಥವಾ ತಮ್ಮ ಮಕ್ಕಳ ಜನ್ಮದಿನವನ್ನು ಆಚರಿಸುವುದನ್ನು ನಿಷೇಧಿಸಲಾಗಿದೆ.