HSRP ನಂಬರ್ ಪ್ಲೇಟ್ ಅಳವಡಿಕೆ; ಮೂರು ತಿಂಗಳ ಗಡುವು ವಿಸ್ತರಿಸಿದ ರಾಜ್ಯ ಸರ್ಕಾರ

By Aishwarya

Published On:

Follow Us

ದೇಶದೆಲ್ಲೆಡೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಎರಡು ಬಾರಿ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು. ಕಳೆದ ಬಾರಿ ಜೂನ್ 15ಕ್ಕೆ ಕೊನೆಯ ದಿನಾಂಕವನ್ನು ನಿಗದಿಪಡಿಸಿತ್ತು ಆದರೆ ಇನ್ನೂ ವಾಹನ ಸವಾರರು ತಮ್ಮ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಸಿಲ್ಲದ ಕಾರಣ ರಾಜ್ಯ ಸರ್ಕಾರವು ಸೆಪ್ಟೆಂಬರ್ 15 ರವರೆಗೆ ನಂಬರ್ ಪ್ಲೇಟ್ ಅಳವಡಿಸಲು ಕಾಲಾವಕಾಶ ನೀಡಿದೆ.

ಕರ್ನಾಟಕ ಹೈಕೋರ್ಟ್ HSRP ನಂಬರ್ ಪ್ಲೇಟ್ ಅಳವಡಿಸಿದವರ ವಿರುದ್ಧ ಜುಲೈ 4ರವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು ಇದರ ಜೊತೆಗೆ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆಗೆ ಅವಕಾಶವನ್ನು ರಾಜ್ಯ ಸರ್ಕಾರವು ನಿರ್ಧರಿಸಲು ಅವಕಾಶ ನೀಡಿತ್ತು. ಹೀಗಾಗಿ ಸೆಪ್ಟಂಬರ್ 15 ರವರೆಗೆ ನಂಬರ್ ಪ್ಲೇಟ್ ಅಳವಡಿಸಲು ಕಾಲಾವಕಾಶವನ್ನು ನೀಡಲಾಗಿದೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ
ಈಗಾಗಲೇ ಅಲವು ಬಾರಿ HSRP ನಂಬರ್ ಪ್ಲೇಟ್ ಅಳವಡಿಸಲು ಗಿಡವನ್ನು ವಿಸ್ತರಿಸಲಾಗಿದೆ ಇದು ಕೊನೆಯ ಬಾರಿ ಸೆಪ್ಟೆಂಬರ್ 15ರವರೆಗೆ ಕಲಾವಕಾಶ ನೀಡಲಾಗಿದೆ ಇದರ ಬಳಿಕ ವಿಸ್ತರಣೆ ಮಾಡುವುದಿಲ್ಲ ಎಂದು ತಿಳಿಸಿದರು.

ಈ ಕುರಿತು ಶೀಘ್ರದಲ್ಲೇ ಗಡುವು ವಿಸ್ತರಣೆಯ ಅಧಿಸೂಚನೆಯನ್ನು ಹೊರಡಿಸಲಾಗುತ್ತದೆ ಮತ್ತೆ ಗಡುಗು ವಿಸ್ತರಣೆ ಮಾಡುವುದಿಲ್ಲ ಸೆಪ್ಟೆಂಬರ್ 15ರ ಒಳಗೆ ಎಲ್ಲಾ ವಾಹನ ಸವಾರರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಗಳನ್ನು ಕೂಡಲೇ ಅಳವಡಿಸಿಕೊಳ್ಳಿ ಇಂದು ವಾಹನ ಸವಾರರಿಗೆ ಮನವಿ ಮಾಡಿದರು.

ಏಪ್ರಿಲ್ 1, 2019 ರ ಮೊದಲು ಖರೀದಿಸಲಾದ ಸುಮಾರು 2 ಕೋಟಿ ವಾಹನಗಳಿಗೆ ಇನ್ನೂ HSRP ನಂಬರ್ ಪ್ಲೇಟ್ ಅಳವಡಿಕೆಯ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ.
HSRP ನಂಬರ್ ಪ್ಲೇಟ್ ಹಾಕಿಸದಿದ್ದರೇ ದಂಡ ವಿಧಿಸಲಾಗುತ್ತದೆ ಆರಂಭಿಕ ದಂಡವು 500 ರೂಪಾಯಿಗಳಿದ್ದು, ಮತ್ತೆ ಸಿಕ್ಕಿಬಿದ್ದರೇ 1000 ರೂಪಾಯಿ ದಂಡ ವಿಧಿಸಲಾಗುತ್ತದೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow