ಅಕ್ರಮ ಆಸ್ತಿಗಳಿಗೆ ಪ್ರಕರಣದಲ್ಲಿ ಕರ್ನಾಟಕ ಡಿಸಿಎಂ ಡಿ.ಕೆ ಶಿವಕುಮಾರ್(dk shivakumar) ಸಲ್ಲಿಸಿದ್ದ ಮೇಲ್ಮನವಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಡಿ.ಕೆ.ಶಿವಕುಮಾಮಾರ್ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ, ಪ್ರಕರಣ ರದ್ದು ಕೋರಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್ ಇದೀಗ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.
ಅಕ್ರಮ ಹಣ ವರ್ಗಾವಣೆ ಆರೋಪದ ಅಡಿಯಲ್ಲಿ 2018ರಲ್ಲಿ ದಾಖಲಾಗಿದ್ದ ಪ್ರಕರಣವನ್ನು ಇಂದು(ಜುಲೈ 18) ರಂದು ಸುಪ್ರೀಂ ಕೋರ್ಟ್ ರದ್ದುಪಡಿಸಿತು. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ತಮಗೆ ನೀಡಿದ ಸಮನ್ಸ್ ಪ್ರಶ್ನಿಸಿ ಕರ್ನಾಟಕ ಹೈಕೋರ್ಟಿಗೆ ಮನವಿ ಸಲ್ಲಿಸಿದರು.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆ ವಿ ವಿಶ್ವನಾಥನ್ ಅವರು ಇರುವ ವಿಭಾಗೀಯ ಪೀಠವು ಕರ್ನಾಟಕ ಹೈ ಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಕ್ಷಮಿಸಿ ಅರ್ಜಿಯನ್ನು ವಜಗೊಳಿಸಲಾಗಿದೆ ಎಂದು ಹೇಳಿದೆ. ಮೂರು ತಿಂಗಳ ಒಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್ ಸೂಚಿಸಿದೆ.
ಡಿಕೆ ಶಿವಕುಮಾರ್ ರವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ 2013 ಮತ್ತು 2018ರ ನಡುವೆ ತಮ್ಮ ಆದಾಯದ ಮೂಲಕ್ಕಿಂತ ಹೆಚ್ಚಿನ ಆಸ್ತಿಯನ್ನು ಸಂಗ್ರಹಿಸಿದ್ದಾರೆ ಎಂದು ಕೇಂದ್ರ ತನಿಕ ದಳವು ಆರೋಪಿಸಿತು. ಈ ನಿಟ್ಟಿನಲ್ಲಿ 2017ರಲ್ಲಿ ಡಿಕೆ ಶಿವಕುಮಾರ್ ಅವರ ಮನೆ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿ ತನಿಖೆ ಪ್ರಾರಂಭಿಸಿ ಅಕ್ಟೋಬರ್ 2020ರಲ್ಲಿ FIR ದಾಖಲಿಸಿತು.