ಸ್ವಾತಂತ್ರ್ಯ ದಿನಾಚರಣೆ, ಸಂವಿಧಾನ ಆಚರಣೆ ದಿನದಂದು ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ: ಸರ್ಕಾರದ ಆದೇಶ

By Aishwarya

Published On:

Follow Us

ರಾಜ್ಯದಲ್ಲಿ ಸ್ವತಂತ್ರ ದಿನಾಚರಣೆ ಮತ್ತು ಸಂವಿಧಾನ ಸಂಭ್ರಮಾಚರಣೆ ದಿನದಂದು ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸಂವಿಧಾನದ ಪಿತಾಮಹ, ಭಾರತ ರತ್ನ ಡಾ|| ಬಿ.ಆ‌ರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಅಧಿಸೂಚನೆಯಲ್ಲಿ ಉಲ್ಲೇಖಿಸಿರುವಂತೆ ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಸಮಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಪ್ರೌಢಶಾಲಾ ಮುತ್ತು ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳನ್ನು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ಇದೇ ನಿಟ್ಟಿನಲ್ಲಿ ನವೆಂಬರ್ 26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಕೂಡ ಎಲ್ಲಾ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸರ್ಕಾರದ ದೀನ ಕಾರ್ಯದರ್ಶಿ -1 ವಿಜಯ್ ಕುಮಾರ್ ಹೆಚ್. ಬಿ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow