ರಾಜ್ಯದಲ್ಲಿನ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇಕಡ 75 % ರಷ್ಟು ಉದ್ಯೋಗ ಮೀಸಲಾತಿಯನ್ನು ನೀಡುವ ಬಗ್ಗೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ. ಆದರೆ ಸರ್ಕಾರದ ಈ ನಡಿಗೆ ಉದ್ಯಮಿಗಳ ತ್ರೀವ್ರ ಅಕ್ಷೇಪ ಕೇಳಿ ಬಂದಿದ್ದು, ಉದ್ಯಮಿಗಳು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
“ಕರ್ನಾಟಕ ರಾಜ್ಯ ಕೈಗಾರಿಕಾ ಕಾರ್ಖಾನೆ ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಮಸೂದೆ -2024” ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತವಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅನುಮೋದನೆಯ ಕುರಿತು ಬಹಿರಂಗಪಡಿಸಿದರು. ಈ ವಿಷಯ ತಿಳಿದ ಉದ್ಯಮಗಳು ಮೀಸಲಾತಿ ಜಾರಿಯಾದರೆ ಕೌಶಲ್ಯಯುಕ್ತ ಮತ್ತು ಪ್ರತಿಭಾವಂತ ಅಭ್ಯರ್ಥಿಗಳ ನೇಮಕಾತಿಗೆ ತೊಡಗಾಗುತ್ತದೆ. ಉದ್ಯಮ ಮತ್ತು ಕೈಗಾರಿಕೆಗಳನ್ನು ನಡೆಸುವುದು ಕಷ್ಟವಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಉದ್ಯಮಿಗಳು ಸರ್ಕಾರದ ಹೊಸ ನಡಿಗೆ ವಿರೋಧ ವ್ಯಕ್ತಪಡಿಸಿದರು.
ಈ ಕುರಿತು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮಾತನಾಡಿ ಕನ್ನಡಿಗರ ಹಿತಾಸಕ್ತಿ ಮತ್ತು ಉದ್ಯಮಗಳ ಹಿತಾಸಕ್ತಿ ಎರಡನ್ನು ಗಮನದಲ್ಲಿಟ್ಟುಕೊಂಡು ಮಸೂದೆ ಸಿದ್ಧಪಡಿಸಲಾಗಿದೆ. ಆಡಳಿತಾತ್ಮಕ ಹುದ್ದೆಗಳಲ್ಲಿ ಮೀಸಲಾತಿ ನೀಡಲಿ ತಾಂತ್ರಿಕ ತುಡುಕುಗಳು ಇದ್ದರೆ ಕಾನೂನು ಸಚಿವರ ಜೊತೆ ಚರ್ಚಿಸಿ ಬಗೆಹರಿಸುತ್ತೇವೆ ಎಂದರು.
ಟ್ವಿಟರ್ ಪೋಸ್ಟ್ ಡಿಲೀಟ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ..
ಬಹಳ ದಿನಗಳ ನಂತರ ರಾಜ್ಯದಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಉದ್ಯೋಗ ಮೀಸಲಾತಿ ವಿಚಾರವು ತೀವ್ರ ಚರ್ಚೆಯಾಗುತ್ತಿದೆ. ಉದ್ಯೋಗ ಮೀಸಲಾತಿ ಕಡ್ಡಾಯ ಮಸೂದೆಗೆ ಅಥವಾ ಸಂಪುಟದಲ್ಲಿ ಒಪ್ಪಿಗೆ ದೊರೆತಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಈಗಾಗಲೇ ಈ ನಿರ್ಧಾರಕ್ಕೆ ಖಾಸಗಿ ಕಂಪನಿಗಳ ಮಾಲೀಕರು ಪರ ವಿರೋಧ ಚರ್ಚೆಯಾಗುತ್ತಿದ್ದ ಸಂದರ್ಭದಲ್ಲಿ ಟ್ವೀಟ್ ಡಿಲೀಟ್ ಮಾಡಿರುವುದು ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಿದೆ.
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜುಲೈ 16 ಅಧಿಕೃತವಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದರು. ಉದ್ಯಮಗಳಿಂದ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಬುಧವಾರ ಮಧ್ಯಾಹ್ನ ಪೋಸ್ಟ್ ಡಿಲೀಟ್ ಮಾಡಿದರು.
ಮತ್ತೆ ಸಂಜೆ ವೇಳೆಗೆ ಮತ್ತೊಂದು ಪೋಸ್ಟ್ ನಲ್ಲಿ “ಖಾಸಗಿ ಕೈಗಾರಿಕೆಗಳು ಇತರ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಹಾಗೂ ಆಡಳಿತಾತ್ಮಕ ವಲ್ಲದ ಹುದ್ದೆಗಳಲ್ಲಿ ಶೇ.75ರಷ್ಟು ಮೀಸಲಾತಿ ನಿಗದಿಪಡಿಸುವ ಅನುಮೋದನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ” ಎಂದು ಮರು ಪೋಸ್ಟ್ ಮಾಡಿದ್ದಾರೆ.