Sameer Nigam: ಕನ್ನಡಿಗರ ಆಕ್ರೋಶಕ್ಕೆ ಮಣಿದ ಫೋನ್ ಪೇ; ಕ್ಷಮೆಯಾಚಿಸಿದ ಸಮೀರ್ ನಿಗಮ್

By Aishwarya

Published On:

Follow Us

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕುರಿತು ಫೋನ್ ಪೇ ಸಿಇಒ ಸಮೀರ್ ನಿಗಮ್ ಹೇಳಿಕೆ Phone pay ಅಪ್ಲಿಕೇಶನ್ ಗೆ ಸಂಕಷ್ಟಕ್ಕೆ ದೂಡಿದೆ. ರಾಜ್ಯದಲ್ಲಿ ಈ ವಿಷಯ ಚರ್ಚೆಯಾಗುತ್ತಿದ್ದಂತೆ ನಟ ಕಿಚ್ಚ ಸುದೀಪ್ ಕೂಡ ಫೋನ್ ಪೇ ಜೊತೆಗಿನ ಕಾಂಟ್ರಾಕ್ಟ್ ಅನ್ನು ಕೊನೆಯದಾಗಿಸಲಿದ್ದಾರೆ ನಿಮ್ಮ ಮಾತು ಅವರ ಆಪ್ತ ವಲಯದಿಂದ ಕೇಳಿಬಂದಿತು. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದ ಫೋನ್ ಪೇ ಸಿಇಓ ಇದೀಗ ಬೇಷರತ್ ಕ್ಷಮೆಯಾಚಿಸಿದೆ. ಇಷ್ಟೇ ಅಲ್ಲ ಕನ್ನಡ, ಕರ್ನಾಟಕ, ಇಲ್ಲಿನ ಜನ, ಸಂಸ್ಕೃತಿ ಬಗ್ಗೆ ಅಪಾರ ಗೌರವವಿದ್ದು, ಸರ್ಕಾರದ ನಿಲುವಿಗೆ ಬದ್ಧ ಎಂದು ಪೋನ್‌ಪೆ ಸಂಸ್ಥಾಪಕ ಹಾಗಾ ಸಿಇಒ ಸಮೀರ್ ನಿಮಗ್ ಅಧಿಕೃತವಾಗಿ ಕ್ಷಮೆ ಕೇಳಿದ್ದಾರೆ.

ಈ ವಿಷಯದ ಕುರಿತು ಫೋನ್ ಪೇ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ ಪೋಸ್ಟ್ ಮಾಡಿದ್ದು ಫೋನ್ ಪೇ ಬೆಂಗಳೂರಿನಲ್ಲಿ ಹುಟ್ಟಿದೆ. ಬೆಂಗಳೂರು ಮಣ್ಣಿನೊಂದಿಗೆ ಫೋನ್‌ಪೇ ಬೆಸೆದುಕೊಂಡಿರುವುದಕ್ಕೆ ಅತೀವ ಸಂತಸವಿದೆ. ವಿಶೇಷವಾಗಿ ಅಂತಾರಾಷ್ಟ್ರೀಯ ಮಟ್ಟದ ತಂತ್ರಜ್ಞಾನದ ಪ್ರತಿಭೆ ಹಾಗೂ ವೈವಿಧ್ಯತೆಯಿಂದ ಕೂಡಿರುವ ಬೆಂಗಳೂರಿನಲ್ಲಿ ನಮ್ಮ ಸಂಸ್ಥೆ ಬೆಳೆದು ನಿಂತಿರುವುದು ನಮಗೆ ಹೆಮ್ಮೆಯ ಪ್ರತೀಕವಾಗಿದೆ. ಬೆಂಗಳೂರಿನಲ್ಲಿ ಹುಟ್ಟಿ ಇದೀಗ ಭಾರತ ಮೂಲೆ ಮೂಲೆಯಲ್ಲಿ ಪಸರಿಸಿದ್ದೇವೆ. ಇದರ ಪರಿಣಾಮ ದೇಶದ 55 ಕೋಟಿ ಭಾರತೀಯರಿಗೆ ಅತ್ಯಂತ ಸುರಕ್ಷತಿ ಹಾಗೂ ಸುಲಭ ಡಿಜಿಟಲ್ ಪಾವತಿ ಸೇವೆ ಒದಗಿಸಲು ಸಾಧ್ಯವಾಗಿದೆ.

ಸಿಲಿಕಾನ್ ಸಿಟಿ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಂಗಳೂರು ಈ ಖ್ಯಾತಿಗೆ ನಿಜಕ್ಕೂ ಅರ್ಹವಾಗಿದೆ. ಇಲ್ಲಿನ ತಂತ್ರಜ್ಞಾನ, ಮೂಲಭೂತ ಸೌಕರ್ಯ, ಹೊಸತನ, ಸಂಸ್ಕೃತಿಯಿಂದ ಕರ್ನಾಟಕದ ಹಾಗೂ ದೇಶದ ಪ್ರತಿಭಾವಂತ ಯುವ ಸಮೂಹವನ್ನು ಆಕರ್ಷಿಸುತ್ತಿದೆ. ಭಾಷೆ, ಸಂಸ್ಕೃತಿ, ಆಚಾರ ವಿಚಾರಗಳ ವೈವಿದ್ಯತೆ ಭಾರತದ ಶ್ರೀಮಂತ ಸಾಂಸ್ಕೃತಿ ಪರಂಪರೆಯ ಆಸ್ತಿಯಾಗಿದೆ.ಇದು ನಾವೆಲ್ಲ ಹೆಮ್ಮೆಪಡುವ ವಿಚಾರ ಎಂದು ಬಲವಾಗಿ ನಂಬಿದ್ದೇನೆ. ಎಲ್ಲಾ ಭಾರತೀಯರು ಸ್ಥಳೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಗೌರವಿಸಬೇಕು ಹಾಗೂ ಆಚರಿಸಬೇಕು ಅನ್ನೋದು ನನ್ನ ಅಭಿಪ್ರಾಯ. ಭಾರತೀಯ ಸ್ಟಾರ್ಟ್‌ಅಪ್ ಕಂಪನಿಗಳು ವಿಶ್ವದ ದೈತ್ಯ ಕಂಪನಿಗಳ ವಿರುದ್ದ ಸ್ಪರ್ಧಿಸುತ್ತಿದೆ. ಆಯಪಲ್, ಗೂಗಲ್, ಅಮೆಜಾನ್, ಮೈಕ್ರೋಸಾಫ್ಟ್ ಸೇರಿದಂತೆ ಟ್ರಿಲಿಯನ್ ಡಾಲರ್ ಕಂಪನಿಗಳ ವಿರುದ್ದ ಭಾರತದ ಸ್ಟಾರ್ಟ್‌ಅಪ್ ಅಷ್ಟೇ ಪರಿಣಾಮಕಾರಿಯಾಗಿ ಸ್ಪರ್ಧಿಸುತ್ತಿದೆ. ಬೆಂಗಳೂರು ಉದ್ಯೋಗ ಸೃಷ್ಟಿಯ ಕೇಂದ್ರ. ಹೆಚ್ಚಿನ ಉದ್ಯೋಗ ಸೃಷ್ಟಿ, ಅಭಿವೃದ್ಧಿ, ಸವಾಲುಗಳಿಗೆ ಸೂಕ್ತ ಪರಿಹಾರ ಹುಡುಕಲು ಎಲ್ಲರು ಜೊತೆಯಾಗಿ ಶ್ರಮಿಸೋಣ ಎಂದು ಸಮೀರ್ ನಿಗಮ್(Sameer Nigam)ವಿವಾದದ ವಿಷಯದ ಕುರಿತು ಕ್ಷಮಾಪಣೆ ಪತ್ರದಲ್ಲಿ ಹೇಳಿದ್ದಾರೆ.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow