Child Marriage: ಬಾಲ್ಯ ವಿವಾಹದಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

By Aishwarya

Published On:

Follow Us

ದೇಶದಲ್ಲಿಯೇ ರಾಜ್ಯವು ಬಾಲ್ಯ ವಿವಾಹ(Child Marriage Karnataka) ಪ್ರಕರಣದಲ್ಲಿ ಎರಡನೇ ಸ್ಥಾನ ಹೊಂದಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಯಾಗಿ ನನಗೂ ತಲೆತಗ್ಗಿಸುವ ವಿಚಾರ ಇದಾಗಿದೆ. ಬಾಲ್ಯ ವಿವಾಹದಲ್ಲಿ ಬಳ್ಳಾರಿ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಬೆಳಗಾವಿ ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಲು ನಾಚಿಕೆ ಆಗುತ್ತದೆ ಎಂದರು.

ಈ ಪ್ರಕರಣಗಳು ಹೆಚ್ಚಾಗಲು ನಮ್ಮ ಇಲಾಖೆಯಲ್ಲಿರುವ ದೋಷಗಳು ಮಾತ್ರ ಕಾರಣವಲ್ಲ, ಸ್ಥಳೀಯ ಗ್ರಾಮ ಪಂಚಾಯಿತಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಎಸ್ ಡಿಎಂಸಿ ಗಳು, ಕಾನೂನು, ಆರೋಗ್ಯ ಹಾಗೂ ಪೊಲೀಸ್ ಇಲಾಖೆಗಳು ಸಹಕಾರ ನೀಡಬೇಕು ಎಲ್ಲರೂ ಕೂಡ ಒಗ್ಗಟ್ಟಿನಲ್ಲಿ ಕಾರ್ಯನಿರ್ವಹಿಸಿದರೆ ಮಾತ್ರ ಬಾಲ್ಯ ವಿವಾಹವನ್ನು ಕಿತ್ತುಹಾಕಲು ಸಾಧ್ಯವಾಗುತ್ತದೆ. ಬಾಲ್ಯ ವಿವಾಹದ ವಿಚಾರ ಗೊತ್ತಾದ ತಕ್ಷಣ ಎಫ್ಐ ಆರ್ ದಾಖಲಿಸಬೇಕು ಎಂದು ತಿಳಿಸಿದರು.

ಬಾಲ್ಯ ವಿವಾಹವನ್ನು ಮೂಢನಂಬಿಕೆಯಿಂದ ಮಾಡ್ತಾರೋ, ಏನೋ ಎಂದೇ ಗೊತ್ತಾಗುತ್ತಿಲ್ಲ ಇದನ್ನು ತಡೆಗಟ್ಟಲು ಗ್ರಾಮ ಮಟ್ಟದಿಂದ ಜಿಲ್ಲಾಮಟ್ಟದವರೆಗೂ ಸಮಿತಿ ಇದೆ, ಅವರು ಬಾಲ್ಯ ವಿವಾಹ ವಿಚಾರ ಗೊತ್ತಾದ ತಕ್ಷಣ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಬಾಲ್ಯ ವಿವಾಹ ನಡೆದು, ಬಾಲ್ಯ ವ್ಯವಸ್ಥೆಯಲ್ಲೇ ಹೆಣ್ಣು ಮಕ್ಕಳು ಗರ್ಭಿಣಿಯಾಗುತ್ತಿದ್ದಾರೆ ಮುಂದಿನ ದಿನಗಳಲ್ಲಿ ಬೇರು ಮಟ್ಟದಿಂದ ಇದನ್ನು ಕಿತ್ತು ಹಾಕಲು ಪ್ರಯತ್ನಿಸಲಾಗುವುದು. ಇದರ ಬಗ್ಗೆ ಉನ್ನತ ಸಭೆ ನಡೆಸಿ ಎಲ್ಲಾ ಅಧಿಕಾರಿಗಳಿಗೂ ನಿರ್ದೇಶನ ನೀಡಲಾಗಿದೆ ಎಂದು ಸಚಿವೆ ತಿಳಿಸಿದರು.

About the Author

ನಮಸ್ತೆ, ಐಶ್ವರ್ಯ ಚಟ್ನಹಳ್ಳಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಎಂ.ಎ ಪದವಿ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆಪ್ರೆಂಟಿಸ್ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಜೊತೆಜೊತೆಗೆ khnewstimes.com ನಲ್ಲಿ ಕಂಟೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದೇನೆ.

For Feedback - feedback@khnewstimes.com

Leave a Comment

Follow