ಕರ್ನಾಟಕ ರಾಜ್ಯ ಸರ್ಕಾರದ ಪ್ರಮುಖ ಇದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ(Gruha Lakshmi Scheme )ಯು ರಾಜ್ಯದ ಲಿಂಗತ್ವ ಅಲ್ಪಸಂಖ್ಯಾತರಿಗೂ ಮಾಸಿಕವಾಗಿ 2 ಸಾವಿರ ಹಣ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಇದೀಗ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ.
ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ತೆರಳಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 8 ರಿಂದ ನಡೆಯಲಿದ್ದು, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ, ಟ್ರಾನ್ಸ್-ಜೆಂಡರ್ ಗುರುತಿನ ಚೀಟಿ ದಾಖಲೆಗಳನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯು ತಿಳಿಸಿದೆ.
ರಾಜ್ಯದ ಸಾಕಷ್ಟು ಬಡ ಮಹಿಳೆಯರಿಗೆ ಗೃಹಲಕ್ಷ್ಮಿ ಹಣವು ಸಹಾಯವಾಗುತ್ತಿದ್ದು. ಲೋಕಸಭಾ ಚುನಾವಣೆಯ ಹಿನ್ನಲೆ ಒಮ್ಮೆಲೇ ಎರಡು ಕಂತಿನ ಮೂಲಕ 4 ಸಾವಿರವನ್ನು ಮಹಿಳೆಯರ ಖಾತೆಗೆ ಸರ್ಕಾರವು ವರ್ಗಾವಣೆ ಮಾಡಿತ್ತು. ಆದರೆ ಇನ್ನೂ ಜೂನ್ ತಿಂಗಳ ಹಣವು ಮಹಿಳೆಯರ ಖಾತೆಗೆ ಬಂದಿರದ ಕಾರಣ ಲಕ್ಷಾಂತರ ಕುಟುಂಬಗಳ ಯಜಮಾನಿಯರು ತಮ್ಮ ಬ್ಯಾಂಕ್ ಖಾತೆಗಳನ್ನು ನೋಡುತ್ತ ಕಾದು ಕುಳಿತಿದ್ದಾರೆ.
Gruha Lakshmi: ಮಂಗಳಮುಖಿಯರಿಗೂ ಸಿಗಲಿದೆ ಗೃಹಲಕ್ಷ್ಮಿ ಯೋಜನೆಯ ಹಣ!
By Aishwarya
Published On:

For Feedback - feedback@khnewstimes.com