Modi 3.0 Budget: ಕೇಂದ್ರ ಸರ್ಕಾರದ 2024ನೇ ಸಾಲಿನ ಬಜೆಟ್ ನಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣದ ಕನಸನ್ನು ನೆನಸು ಮಾಡಿಕೊಳ್ಳಲು ಯೋಜನೆ ಒಂದನ್ನು ರೂಪಿಸಿದೆ. ಈ ಮೂಲಕ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷದವರೆಗಿನ ಸಾಲ ಸೌಲಭ್ಯ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಘೋಷಿಸಲಾಗಿದೆ.
ದೇಶದಲ್ಲಿರುವ ಶೈಕ್ಷಣಿಕ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದಲೇ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಸರ್ಕಾರಿ ಯೋಜನೆಗಳು ಮತ್ತು ನೀತಿಗಳ ಅಡಿಯಲ್ಲಿ ಯಾವುದೇ ಪ್ರಯೋಜನಕ್ಕೆ ಅರ್ಹರಾಗದ ನಮ್ಮ ಯುವಕರಿಗೆ ಸಹಾಯ ಮಾಡಲು ಸರ್ಕಾರವು ದೇಶಿಯ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣಕ್ಕೆ 10 ಲಕ್ಷದವರೆಗಿನ ಸಾಲಗಳಿಗೆ ಆರ್ಥಿಕ ಬೆಂಬಲ ನೀಡುತ್ತದೆ ಎಂದು ತಿಳಿಸಿದರು.
ಪ್ರತಿ ವರ್ಷ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಇ- ವೋಚರ್ ಗಳ ಮೂಲಕ ಶೇ.3% ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತದೆ. ಇದರ ಸಹಾಯದಿಂದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಕನಸನ್ನು ನನಸಾಗಿಸಬಹುದು ಎಂದು ಹೇಳಿದರು.
ಕೇಂದ್ರ ಸರ್ಕಾರದ ಈ ನೂತನ ಯೋಜನೆಯು ಯಾವಾಗ ಜಾರಿಯಾಗಲಿದೆ ಎಂಬುದರ ಕುರಿತು ಮಾಹಿತಿ ದೊರೆತಿಲ್ಲ. ಸದ್ಯಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದ್ದು ಇದರ ಮುಂದುವರೆದ ಮಾಹಿತಿಯನ್ನು ಸರ್ಕಾರವು ಶೀಘ್ರದಲ್ಲಿ ತಿಳಿಸಲಾಗುತ್ತದೆ.