ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಾಳೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆ ಮೈಸೂರಿಗೆ ಆಗಮಿಸಲಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ನಡೆಯಲಿದ್ದು, ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ಆಗಮಿಸಲಿದೆ.
Mysore Dasara 2024
ನಾಳೆ ಬೆಳಗ್ಗೆ ನಾಗರಹೊಳೆಯ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ದೊರೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ .ಸಿ. ಮಹದೇವಪ್ಪ 10.20ರಿಂದ 10.45ರ ಶುಭ ತುಲಾ ಲಗ್ನದಲ್ಲಿ ಗಜಪೂಜೆ ನಡೆಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಿದ್ದಾರೆ.
ನಾಳಿನ ಕಾರ್ಯಕ್ರಮದಲ್ಲಿ ಸಚಿವರುಗಳಾದ ಡಾ.ಎಚ್.ಸಿ ಮಹದೇವಪ್ಪ, ಅರಣ್ಯ ಸಚಿವರಾದ ಈಶ್ವರಖಂಡ್ರೆ ಸೇರಿದಂತೆ ಹಲವು ಗಣ್ಯರು ಭಾಗಿಯಾಗುವರು. ಈ ಬಾರಿಯ ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿಯಾಗಲಿದ್ದು, ಮೊದಲ ಹಂತದಲ್ಲಿ ನಾಳೆ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಬರಲಿವೆ.