ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವ ಜನರಿಗೆ ಆಹಾರ ಸಚಿವರು ಸಿಹಿ ಸುದ್ದಿಯನ್ನು ನೀಡಿದ್ದು, ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲನೆ ಮಾಡಿ ಶೀಘ್ರದಲ್ಲೇ ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆ(New Ration Card Distribution) ಮಾಡಲಾಗುವುದು ಎಂದು ತಿಳಿಸಿದರು.
ಸೋಮವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಾತನಾಡಿದವರು ಬಿಪಿಎಲ್ ಕಾರ್ಡ್ ಗಾಗಿ ರಾಜ್ಯದಲ್ಲಿ 1.73 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡಿ ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್‌ಗೆ ಅರ್ಜಿ ಹಾಕಿದ ಒಂದು ವಾರದೊಳಗೆ ಅಂಥವರಿಗೆ ಆರೋಗ್ಯ ಸೇವೆ ಸಿಗುವಂತಹ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಬಿಜೆಪಿಯ ಪ್ರತಾಪ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಾಪ ಸಿಂಹ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, “2.95 ಲಕ್ಷ ಪಡಿತರ ಚೀಟಿಗಾಗಿ ಅರ್ಜಿ ಬಂದಿವೆ. ಇದರಲ್ಲಿ 2.36 ಲಕ್ಷ ಮಂದಿ ಅರ್ಹರಿದ್ದಾರೆ. ಬಾಕಿ 59, 930 ಅರ್ಜಿದಾರರು ಬಿಪಿಎಲ್ ಕಾರ್ಡ್ ಕೆಳಗೆ ಬರುವುದಿಲ್ಲ, ಅರ್ಹರಲ್ಲಿ 62,000 ಕಾರ್ಡ್ ಗಳನ್ನು ಈಗಾಗಲೇ ಪಟ್ಟಿಗೆ ತಂದು ಪಡಿತರ ವಿತರಣೆ ಮಾಡಲಾಗುತ್ತಿದೆ. ಬಾಕಿ ಕಾರ್ಡುಗಳನ್ನು ಪರಿಶೀಲಿಸಲಾಗುತ್ತಿದ್ದು, ಬಾಕಿ ಇರುವ 1.73 ಲಕ್ಷ ಕಾರ್ಡುದಾರರಿಗೆ ಆದಷ್ಟು ಬೇಗ ಪಡಿತರ ವಿತರಿಸಲಾಗುತ್ತದೆ” ಎಂದರು.
ಆರೋಗ್ಯ ಸಂಬಂಧಿತ ಚಿಕಿತ್ಸೆಗೆ ಪಡಿತರ ಕಾರ್ಡ್ ವಿತರಿಸಲು ಕಾಲಮಿತಿ ಇಲ್ಲ. ಒಂದು ವಾರದಲ್ಲಿ ಕಾರ್ಡ್ ವಿತರಿಸಲಾಗುತ್ತದೆ. ಈವರೆಗೂ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಸೇರಿ 4 ಕೋಟಿಗೂ ಅಧಿಕ ಕಾರ್ಡುಗಳನ್ನು ವಿತರಣೆ ಮಾಡಿದ್ದೇವೆ. ಆರೋಗ್ಯ ಸಂಬಂಧಿತ ಯಾರೇ ಅರ್ಜಿ ಸಲ್ಲಿಸಿದರು ಕೂಡಲೇ ಕಾರ್ಡ್ ಕೊಡಲು ಕ್ರಮ ವಹಿಸಲಾಗುತ್ತದೆ ಎಂದರು.