ಕಾವೇರಿ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿಗೂ ವಿವಾದವು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತದೆ. ಕರ್ನಾಟಕಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಮತ್ತೆ ಶಾಕ್ ಎದುರಾಗಿದ್ದು ತಮಿಳುನಾಡಿಗೆ ಪ್ರತಿನಿತ್ಯ ಒಂದು ಟಿಎಂಸಿ ಕಾವೇರಿ ನೀರು ಬಿಡುವಂತೆ CWRC ಆದೇಶ ಹೊರಡಿಸಿದೆ.
ಜುಲೈ 12 ರಿಂದ 31ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ಈ ಮೂಲಕ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದೆ. ರಾಜ್ಯದ ಹಲವು ಕಡೆ ಭರ್ಜರಿ ಮಳೆಯಾಗುತ್ತಿದೆ ಆದರೆ ರಾಜ್ಯದಲ್ಲಿ ಇನ್ನೂ ಅನೇಕ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗಿಲ್ಲ. ಇದರ ನಡುವೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಬಿಡುವಂತೆ ಆದೇಶಿಸಿರುವುದು ಕನ್ನಡ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮವಾಗಿ ಮಳೆಯಾಗಿದ್ದು, ಕೆಆರ್‌ಎಸ್ ಅಣೆಕಟ್ಟಿಗೆ 100 ಅಡಿಗೂ ಹೆಚ್ಚು ನೀರು ಹರಿದುಬಂದಿದೆ. ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಒಟ್ಟು 58 ಟಿಎಂಸಿ ನೀರು ಸೇರಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24,705 ಟಿಎಂಸಿ ಸಂಗ್ರಹವಿದೆ. ಸದ್ಯಕ್ಕೆ ನೀರು ಬಿಡುವ ಬಗ್ಗೆ ಯಾವುದೇ ಶಿಫಾರಸು ಮಾಡಬೇಡಿ, ಜುಲೈ 25 ರವರಿಗೆ ಮಲೆಯ ಪ್ರಮಾಣ ನೋಡಿಕೊಂಡು ಶಿಫಾರಸು ಮಾಡಿ ಎಂದು ಕರ್ನಾಟಕವು CWRC ಸಭೆಯಲ್ಲಿ ಮನವಿ ಮಾಡಿತ್ತು.